ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದು, ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತರನ್ನು ಆಫ್ರಿಕಾ ಮೂಲದ ಜೊಯಲ್ ಕಾಬೊಂಗ್, ಜೊಯ್ ಸಂಡೇ ಎಂದು ಗುರುತಿಸಲಾಗಿದೆ. ಬಂಧಿತರಿಂದ 5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ.
ಕಳೆದ ಮೂರು ವರ್ಷದ ಹಿಂದೆ ಭಾರತಕ್ಕೆ ಬಂದಿದ್ದ ಆರೋಪಿಗಳು ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲೇ ವಾಸವಾಗಿದ್ದರು. ಆ.15 ರಂದು ಸಂಜೆ ಆರೋಪಿಗಳು ಬೆಟ್ಟದಾಮಸಪುರದಲ್ಲಿ ಸಿಕ್ಕಿಬಿದ್ದಿದ್ದಾರೆ.