ʼಸ್ಪಾʼ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ; 10 ಯುವತಿಯರು, 11 ಗ್ರಾಹಕರನ್ನು ವಶಕ್ಕೆ ಪಡೆದ ಪೊಲೀಸ್

ವಿಜಯವಾಡ ನಗರದ ಪಶುವೈದ್ಯ ಕಾಲೋನಿ ಸರ್ವಿಸ್ ರಸ್ತೆಯ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ 10 ಯುವತಿಯರು ಮತ್ತು 11 ಗ್ರಾಹಕರನ್ನು ವಶಕ್ಕೆ ಪಡೆದಿದ್ದಾರೆ.

ಮಚಾವರಂ ಪೊಲೀಸರ ಪ್ರಕಾರ, ಈ ಪ್ರಕರಣದಲ್ಲಿ ಚಲಸಾನಿ ಪ್ರಸನ್ನ ಭಾರ್ಗವ್ ಮುಖ್ಯ ಆರೋಪಿಯಾಗಿದ್ದು, ಕಾನೂನಿನಿಂದ ತಪ್ಪಿಸಿಕೊಳ್ಳಲು ಬೇರೆಯವರ ಹೆಸರಿನಲ್ಲಿ ಸ್ಪಾ ನಡೆಸುತ್ತಿದ್ದನು.

ಸ್ಪಾದಲ್ಲಿ ಕೆಲ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ನಿರ್ದಿಷ್ಟ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಯುವತಿಯರು ಮತ್ತು ಗ್ರಾಹಕರನ್ನು ವಶಕ್ಕೆ ಪಡೆದಿದ್ದಾರೆ. ಆದರೆ, ಮುಖ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಮುಖ್ಯ ಆರೋಪಿ ಭಾರ್ಗವ್‌ಗೆ ಯಾವುದೇ ರಾಜಕೀಯ ಪಕ್ಷದ ನಂಟಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read