HomeKarnatakaಅವಧಿ ಮುಗಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ; ಗೋಡೌನ್ ಮೇಲೆ...

ಅವಧಿ ಮುಗಿದ ತಿಂಡಿ ಪ್ಯಾಕೇಟ್ ಮೇಲೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ; ಗೋಡೌನ್ ಮೇಲೆ ಪೊಲೀಸರ ದಾಳಿ

ಬೆಂಗಳೂರು: ಅವಧಿ ಮುಗಿದ ತಿಂಡಿ, ತಿನಿಸುಗಳ ಪ್ಯಾಕೇಟ್ ಮೇಲೆ ಹೊಸ ಎಕ್ಸ್ ಪೈರ್ ಡೇಟ್ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣ ಸಂಬಂಧ ಗೋಪಾಲಪುರದ ಬಳಿಯ ಗೋಡೌನ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ರೋಹಿತ್ ಫರ್ನಾಂಡೀಸ್ ಎಂಬಾತ ಗೋಡೌನ್ ಬಾಡಿಗೆಗೆ ಪಡೆದು ಹಣದ ಆಸೆಗಾಗಿ ಅವಧಿ ಮುಗಿದ ತಿಂಡಿಗಳ ಪ್ಯಾಕೆಟ್ ಮೇಲೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ. ಥಿನ್ನರ್ ಹಾಗೂ ಕೆಮಿಕಲ್ ಸಹಾಯದಿಂದ ಹೊಸ ಎಕ್ಸ್ ಪೈರಿ ಡೇಟ್ ಮುದ್ರಣ ಮಾಡಲಾಗುತ್ತಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಗೋಡೌನ್ ಮೇಲೆ ದಾಳಿ ನಡೆಸಿದ ಪೊಲೀಸರು, ಗೋಡೌನ್ ಮ್ಯಾನೇಜರ್ ವೆಂಕಟೇಶ್ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರು ದಾಳಿ ನಡೆಸುತಿದ್ದಂತೆ 15ಕ್ಕೂ ಹೆಚ್ಚು ಕಾರ್ಮಿಕರು ಸ್ಥಳದಿಂದ ಪರಾರಿಯಾಗಿದ್ದಾರೆ.

ದಾಳಿ ವೇಳೆ ಅಪಾರ ಪ್ರಮಾಣದ ಆಹಾರದ ಪ್ಯಾಕೇಟ್, ಹಲವು ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular