ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ಮುಂದುವರಿಸಲಾಗಿದೆ. ಕೊರಿಯೋಗ್ರಾಫರ್ ಆಗಿರುವ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸಲಾಗಿದೆ.

ಬೆಂಗಳೂರಿನಲ್ಲಿ ಓದುತ್ತಿರುವ ಅನ್ಯರಾಜ್ಯದ ಯುವತಿ ಆಗಸ್ಟ್ 17ರಂದು ರಾತ್ರಿ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿ ವಾಪಸ್ ಮನೆಗೆ ಬರುವಾಗ ಅಪರಿಚಿತನ ಬೈಕ್ ನಲ್ಲಿ ಡ್ರಾಪ್ ತೆಗೆದುಕೊಂಡಿದ್ದಾಳೆ. ಮಾರ್ಗ ಮಧ್ಯೆ ಕೆಳಗಿಳಿದಿದ್ದಾಳೆ. ನಂತರ ಬೇರೆ ಬೈಕ್ ಹತ್ತಿದ್ದು ಯುವತಿ ಮದ್ಯದ ನಶೆಯಲ್ಲಿರುವುದನ್ನು ಬಂಡವಾಳ ಮಾಡಿಕೊಂಡ ಆರೋಪಿ ಬೊಮ್ಮನಹಳ್ಳಿ ಸಮೀಪ ನಿರ್ಜನ ಪ್ರದೇಶದಲ್ಲಿ ಲಾರಿ ನಿಲ್ಲಿಸುವ ಜಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಯುವತಿ ಮೊಬೈಲ್ ನಲ್ಲಿ ಎಮರ್ಜೆನ್ಸಿ ಎಸ್ಒಎಸ್ ಬಟನ್ ಒತ್ತಿದ್ದು, ತಕ್ಷಣ ಆಕೆಯ ಸ್ನೇಹಿತರಿಗೆ ಮಾಹಿತಿ ಹೋಗಿದೆ. ಅವರು ಸ್ಥಳಕ್ಕೆ ಬಂದಾಗ ಅಪರಿಚಿತ ಅಲ್ಲಿಂದ ಓಡಿ ಹೋಗಿದ್ದಾನೆ. ಆತನ ಮುಖದ ಮೇಲೆ ಪರಚಿದ ಗಾಯಗಳಾಗಿವೆ ಎಂದು ಸ್ನೇಹಿತರು ಮಾಹಿತಿ ನೀಡಿದ್ದರು. ಕಾರ್ಯಪ್ರವೃತ್ತರದ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read