ಬೆಂಗಳೂರು : ನಟ ದರ್ಶನ್ ಸೇರಿ 7 ಆರೋಪಿಗಳ ಬಂಧನಕ್ಕೆ ಪೊಲೀಸರು ಸಿದ್ದತೆ ನಡೆಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸರು ಅಲರ್ಟ್ ಆಗಿದ್ದಾರೆ. ಎಲ್ಲಾ ಆರೋಪಿಗಳನ ಚಲನವಲನದ ಬಗ್ಗೆ ನಿಗಾ ಇಡಲು ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಟ ದರ್ಶನ್ ರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿ ನಂತರ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈ ಹಿನ್ನೆಲೆ ಜೈಲಾಧಿಕಾರಿಗಳು ಮುಂದಿನ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಬಿಗ್ ಶಾಕ್ ನೀಡಿದೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದುಗೊಳಿಸಿ ತೀರ್ಪು ಪ್ರಕಟಿಸಿದೆ.
ನಟ ದರ್ಶನ್ ಹಾಗೂ ಗ್ಯಾಂಗ್ ನ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ತಕ್ಷಣ ದರ್ಶನ್ ಸೇರಿದಂತೆ ಏಳು ಆರೋಪಿಗಳನ್ನು ವಶಕ್ಕೆ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸ ಫಿಕ್ಸ್ ಆಗಿದೆ.
You Might Also Like
TAGGED:ನಟ ದರ್ಶನ್