BIG NEWS: ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕಮಿಷ್ನರ್: ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಿಷ್ನರ್ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ಸಮವಸ್ತ್ರದಲ್ಲಿ ಅಶಿಸ್ತು ತೋರುವ ಪೊಲೀಸ್ ಸಿಬ್ಬಂದಿಗಳ ಮೇಲೆ ನಿಗಾ ವಹಿಸುವಂತೆ ಸೂಚಿಸಿದ್ದು, ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳಲ್ಲಿ ಫೋಟೋ, ರೀಲ್ಸ್ ಅಪ್ ಲೋಡ್ ಮಾಡುವಂತಿಲ್ಲ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ, ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಒಟಲ್ ಪ್ಲಾಟ್ ಫಾರ್ಮ್ ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿ ಬಿಂಬಿಸುವಂತಿರಬೇಕು ಹಾಗಾಗಿ ಸಮವಸ್ತ್ರ ಧರಿಸಿ ರೀಲ್ಸ್ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read