ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸಮಯ ಪ್ರಜ್ಞೆಯಿಂದ ಪ್ರಾಣ ಉಳಿಸಿದ ಪೊಲೀಸರು

ಹುಬ್ಬಳ್ಳಿ: ವ್ಯಕ್ತಿಯೋರ್ವ ಕುಡಿದ ಮತ್ತಲ್ಲಿ ನೇಣು ಬಿಗಿದುಕೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ವ್ಯಕ್ತಿಯ ಪ್ರಾಣ ಉಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡದ ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಂಭುಲಿಂಗಯ್ಯ ಹುಲಸೋಗಿ ಎಂಬಾತ ಕಂಠಪೂರ್ತಿ ಕುಡಿದು, ಮನೆಯಲ್ಲಿಯೇ ನೇಣಿಗೆ ಶರಣಾಗಲು ಮುಂದಾಗಿದ್ದಾನೆ. ಕಂಗಾಲಾದ ಪತ್ನಿ-ಮಕ್ಕಳು ತಕ್ಷಣ 112ಕ್ಕೆ ಕರೆ ಮಾಡಿದ್ದಾರೆ. ಕರೆ ಬರುತ್ತಿದ್ದಂತೆ ಅಲರ್ಟ್ ಆದ ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಗಣೇಶ್ ಹಾಗೂ ಸಂಗನಗೌಡರ ತಕ್ಷಣ ಶಂಭುಲಿಂಗಯ್ಯ ಬಿಗಿದುಕೊಂಡಿದ್ದ ನೇಣಿನ ಹಗ್ಗ ಕಳಚಿ, ಆತನನ್ನು ಕೆಳಗಿಳಿಸಿ ರಕ್ಷಿಸಿದ್ದಾರೆ. ಶಂಭುಲಿಂಗಯ್ಯನನ್ನು ಕಲಘಟಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read