HomeLatest Newsಪೊಲೀಸರು ಜಾತಿ -ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು : CM ಸಿದ್ದರಾಮಯ್ಯ

ಪೊಲೀಸರು ಜಾತಿ -ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು : CM ಸಿದ್ದರಾಮಯ್ಯ

ಬೆಂಗಳೂರು : ಪೊಲೀಸರು ಜಾತಿ ತಾರತಮ್ಯ ಪ್ರಕರಣಗಳನ್ನ ಗಂಭೀರವಾಗಿ ಪರಿಗಣಿಸಿ ದೌರ್ಜನ್ಯಗಳನ್ನು ತಡೆಗಟ್ಟಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಇಂದಿನ ಪ್ರಶಸ್ತಿ ವಿಜೇತರ ಸಾಧನೆ ಶ್ಲಾಘನೀಯವಾಗಿದ್ದು, ಇತರರಿಗೆ ಮಾದರಿಯಾಗಬೇಕು. ಸಮಾಜದಲ್ಲಿನ ನ್ಯೂನ್ಯತೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪೊಲೀಸ್ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಆತ್ಮವಿಮರ್ಶೆ ಮಾಡಿಕೊಂಡು ಉತ್ತಮ ಸೇವೆ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಜಾತಿ ವ್ಯವಸ್ಥೆಯಿದ್ದು, ಅನೇಕ ದುರ್ಬಲ ವರ್ಗದವರು ಈಗಲೂ ಜಾತಿ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ದೌರ್ಜನ್ಯಗಳನ್ನು ತಡೆಗಟ್ಟಬೇಕು.

ಪ್ರತಿ ಜಿಲ್ಲೆಯಲ್ಲಿ ಡಿಸಿಆರ್ಇ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ನಾನು ಇತ್ತೀಚೆಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಡಿಸಿಆರ್ಇ ಪೊಲೀಸ್ ಠಾಣೆಗಳ ಕಾರ್ಯ ಮತ್ತು ಪ್ರಗತಿ ತೃಪ್ತಿದಾಯಕವಿಲ್ಲ ಎಂಬುದನ್ನು ಗಮನಿಸಿದ್ದೇನೆ. ಇದನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ದುರ್ಬಲವರ್ಗದವರಿಗೆ ಸುರಕ್ಷತೆ ಒದಗಿಸುವ ಸರ್ಕಾರದ ಉದ್ದೇಶ ಸಫಲಗೊಳ್ಳುವಂತೆ ಕಾರ್ಯನಿರ್ವಹಿಸಬೇಕು. ಇತರೆ ರಾಜ್ಯಗಳಿಗೆ ಹೋಲಿಸಿದರೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿರುದ್ಧ ಶಿಕ್ಷೆಯ ಪ್ರಮಾಣ ನಮ್ಮಲ್ಲಿ ಬಹಳ ಕಡಿಮೆಯಿದೆ. ಈ ಬಗ್ಗೆ ಪೊಲೀಸರು ಗಮನಹರಿಸಬೇಕು.

ಇಂದು ವಿಶಿಷ್ಠ ಸೇವೆ ಸಲ್ಲಿಸಿರುವ ಪೊಲೀಸರಿಗೆ ಕೊಡಮಾಡಲಾದ ಸೇವಾಪದಕದ ಹಿಂದೆ ಅವರ ಸೇವಾ ಮನೋಭಾವ, ಪ್ರಾಮಾಣಿಕತೆ ಹಾಗೂ ಪರಿಶ್ರಮವಿರುತ್ತದೆ. ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಇಂತಹ ಸಾಧನೆ ಸಾಧ್ಯವಾಗುತ್ತದೆ.ಪೊಲೀಸರಿಗೆ ಸಾಮಾಜಿಕ ಬದ್ಧತೆಯಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಬಲಾಢ್ಯರ ಕೈಯ್ಯಲ್ಲಿ ಅಧಿಕಾರವಿದ್ದರೆ, ದುರ್ಬಲ ವರ್ಗದವರ ಜೀವನ ದುಸ್ತರವಾಗುತ್ತದೆ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅವರು ತಿಳಿಸಿದ್ದರು. ದುರ್ಬಲ ವರ್ಗಗಳ ಮೇಲಾಗುವ ದೌಜರ್ನ್ಯಗಳನ್ನು ಪೊಲೀಸರು ತಡೆಗಟ್ಟಬೇಕಿದೆ. ಸಾಮಾನ್ಯ ಜನರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular