HomeKarnatakaಪೊಲೀಸ್ ಠಾಣೆ, ಫುಟ್‌ಪಾತ್‌ಗಳಿಂದ 8,500 ಜಪ್ತಿ ವಾಹನಗಳ ಸ್ಥಳಾಂತರಕ್ಕೆ ಕ್ರಮ: ಕೃಷ್ಣ ಬೈರೇಗೌಡ

ಪೊಲೀಸ್ ಠಾಣೆ, ಫುಟ್‌ಪಾತ್‌ಗಳಿಂದ 8,500 ಜಪ್ತಿ ವಾಹನಗಳ ಸ್ಥಳಾಂತರಕ್ಕೆ ಕ್ರಮ: ಕೃಷ್ಣ ಬೈರೇಗೌಡ

ಬೆಂಗಳೂರು- ಹಲವು ವರ್ಷಗಳಿಂದ ಪೊಲೀಸ್ ಠಾಣೆಗಳ ಆವರಣ, ರಸ್ತೆಗಳು ಹಾಗೂ ಫುಟ್‌ಪಾತ್‌ಗಳಲ್ಲಿ ನಿಂತಿರುವ ಸುಮಾರು 8,500 ಜಪ್ತಿ ವಾಹನಗಳನ್ನು ಶೀಘ್ರದಲ್ಲೇ ನಗರದ ಹೊರವಲಯದ ನಿಗದಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಸಚಿವರು, ಜಪ್ತಿ ವಾಹನಗಳಿಂದಾಗಿ ಪೊಲೀಸ್ ಠಾಣೆಗಳ ಜಾಗ ಅತಿಕ್ರಮಣವಾಗುವುದರ ಜತೆಗೆ, ಹಲವು ಕಡೆ ಫುಟ್‌ಪಾತ್‌ಗಳು ಹಾಗೂ ರಸ್ತೆಗಳಲ್ಲೂ ವಾಹನಗಳನ್ನು ನಿಲ್ಲಿಸಿರುವುದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದಾರೆ.

ನ್ಯಾಯಾಲಯಗಳಲ್ಲಿ ಪ್ರಕರಣಗಳು ವರ್ಷಗಟ್ಟಲೆ ನಡೆಯುವುದರಿಂದ ಜಪ್ತಿ ಮಾಡಿರುವ ವಾಹನಗಳನ್ನು ತಕ್ಷಣವೇ ವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಹಲವು ವರ್ಷಗಳಿಂದ ವಾಹನಗಳು ಠಾಣೆಗಳ ಆವರಣದಲ್ಲೇ ನಿಂತು ಸಂಪೂರ್ಣವಾಗಿ ಹಾಳಾಗುತ್ತಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸಾರ್ವಜನಿಕರಿಂದಲೂ ಹಲವು ವರ್ಷಗಳಿಂದ ಒತ್ತಾಯ ಕೇಳಿಬರುತ್ತಿತ್ತು ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ತಿಂಗಳ ಸತತ ಪ್ರಯತ್ನದ ಬಳಿಕ ಜಾಗ ಗುರುತು

*ಎರಡು ತಿಂಗಳ ಸತತ ಪ್ರಯತ್ನದ ಬಳಿಕ ಜಾಗ ಗುರುತು*

*

ಸಾರ್ವಜನಿಕರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕಳೆದ ಎರಡು ತಿಂಗಳಿನಿಂದ ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಜಪ್ತಿ ವಾಹನಗಳನ್ನು ನಿಲುಗಡೆ ಮಾಡಲು ಸೂಕ್ತ ಜಾಗ ಗುರುತಿಸುವ ಕಾರ್ಯ ನಡೆಸಲಾಗಿದೆ. ಇದೀಗ ಕಂದಾಯ ಇಲಾಖೆ ಹಲವು ಕಡೆ ಜಮೀನುಗಳನ್ನು ಕಾಯ್ದಿರಿಸಿದ್ದು, ಇನ್ನೂ ಕೆಲವು ಜಮೀನುಗಳಿಗೆ ಸರ್ಕಾರದ ಅನುಮೋದನೆ ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಪೂರ್ವ, ಬೆಂಗಳೂರು ದಕ್ಷಿಣ, ಆನೇಕಲ್, ಯಲಹಂಕ ಹಾಗೂ ಬೆಂಗಳೂರು ಉತ್ತರ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಒಟ್ಟು ಹಲವು ಎಕರೆ ಜಮೀನನ್ನು ಜಪ್ತಿ ವಾಹನಗಳ ನಿಲುಗಡೆಗೆ ಬಳಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕಂದಾಯ ಇಲಾಖೆಯಿಂದ ಮಂಜೂರಾದ ಜಮೀನನ್ನು ಪೊಲೀಸ್ ಇಲಾಖೆ ವಶಕ್ಕೆ ಪಡೆದು, ಜೆಸಿಬಿ ಮೂಲಕ ಜಾಗವನ್ನು ಸಮತಟ್ಟು ಮಾಡಿ ಕಾಂಪೌಂಡ್ ಅಥವಾ ಬೇಲಿ ನಿರ್ಮಿಸಲಿದೆ. ಬಳಿಕ ಯಾವ ಠಾಣೆಯಲ್ಲಿರುವ ವಾಹನಗಳನ್ನು ಯಾವ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂಬುದನ್ನು ಪೊಲೀಸ್ ಇಲಾಖೆ ನಿರ್ಧರಿಸಲಿದೆ.

15–20 ದಿನಗಳಲ್ಲಿ ಸ್ಥಳಾಂತರ

15–20 ದಿನಗಳಲ್ಲಿ ಸ್ಥಳಾಂತರ

ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ 15ರಿಂದ 20 ದಿನಗಳೊಳಗೆ ಸುಮಾರು 8,500 ಜಪ್ತಿ ವಾಹನಗಳನ್ನು ನಿಗದಿತ ಸ್ಥಳಗಳಿಗೆ ಸ್ಥಳಾಂತರಿಸುವ ಗುರಿ ಹೊಂದಲಾಗಿದೆ .

ಜಪ್ತಿ ವಾಹನಗಳನ್ನು ಜನನಿಬಿಡ ಪ್ರದೇಶಗಳಿಂದ ಬೇರೆಡೆಗೆ ಸ್ಥಳಾಂತರಿಸುವುದರಿಂದ ಪೊಲೀಸ್ ಠಾಣೆಗಳ ಆವರಣ ಮುಕ್ತವಾಗುವುದರ ಜತೆಗೆ, ರಸ್ತೆ ಮತ್ತು ಫುಟ್‌ಪಾತ್‌ಗಳಲ್ಲಿನ ಅತಿಕ್ರಮಣವೂ ಕಡಿಮೆಯಾಗಲಿದೆ.

ಇದರಿಂದ ಪಾದಚಾರಿಗಳ ಸಂಚಾರ ಹಾಗೂ ನಗರದ ಸಂಚಾರ ವ್ಯವಸ್ಥೆಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ನಗರದ ಟ್ರಾಫಿಕ್ ಮತ್ತು ಫುಟ್‌ಪಾತ್‌ ಸುಧಾರಣೆಯ ನಿಟ್ಟಿನಲ್ಲಿ ಇದು ಮತ್ತೊಂದು ಸಣ್ಣ ಆದರೆ ಮಹತ್ವದ ಹೆಜ್ಜೆಯಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಪ್ತಿ ವಾಹನಗಳ ನಿಲುಗಡೆಗೆ ಅಗತ್ಯ ಜಾಗ ಒದಗಿಸಿದ ಕಂದಾಯ ಇಲಾಖೆಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular