ಹುಬ್ಬಳ್ಳಿ: ಪೊಲೀಸ್ ಠಾಣೆಯಿಂದಲೇ ಕೊಲೆ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯಲ್ಲಿ ನಡೆದಿದೆ.
ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಕೊಲೆ ಆರೋಪಿ ಪ್ರಜ್ವಲ್ ಎಸ್ಕೇಪ್ ಆಗಿದ್ದಾನೆ. ಕೊಲೆ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಆರೋಪಿ ಪ್ರಜ್ವಲ್ ನನ್ನು ಕರೆತರಲಾಗಿತ್ತು. ಆದರೆ ಪೊಲೀಸರ ಕಣ್ತಪ್ಪಿಸಿ ಈಗ ಠಾಣೆಯಿಂದಲೇ ಪರಾರಿಯಾಗಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಕಮಿಷನರ್ ಶಶಿಕುಮಾರ್, ಪೊಲೀಸ್ ಠಾಣೆಯಿಂದ ಕೊಲೆ ಆರೋಪಿ ಎಸ್ಕೇಪ್ ಆಗಿದ್ದು, ಆದಷ್ಟು ಬೇಗ ಆತನನ್ನು ವಶಕ್ಕೆ ಪಡೆಯುತ್ತೇವೆ ಎಂದಿದ್ದಾರೆ.
ಪೊಲೀಸ್ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಈ ಬಗ್ಗೆ ಇನ್ಸ್ ಪೆಕ್ಟರ್ ಕಡೆಯಿಂದ ವರದಿ ಕೇಳಿದ್ದೇವೆ. ಕರ್ತವ್ಯಲೋಪವೆಸಗಿದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

