ಬೆಂಗಳೂರಲ್ಲಿ ಪ್ಯಾಲೆಸ್ತೀನ ಪರ ನಾಟಕ ತಡೆದ ಪೊಲೀಸರು : ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು : ಬೆಂಗಳೂರಿನ ರಂಗಶಂಕರದಲ್ಲಿ ಬುಧವಾರ ಆಯೋಜಿಸಲಾಗಿದ್ದ ಪ್ಯಾಲೆಸ್ತೀನ ಪರವಾದ ನಾಟಕವನ್ನು ಪೊಲೀಸರು ತಡೆದಿದ್ದು, ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಪ್ಯಾಲೆಸ್ತೀನ ಪರವಾದ ಕಿರು ನಾಟಕ, ಕವನ ವಾಚನ ಕಾರ್ಯಕ್ರಮಕ್ಕೆ ಪೊಲೀಸರು ನಿರಾಕರಣೆ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳುವಳಿಕೆಯ ಕಾರಣಕ್ಕಾಗಿ ಅನಾವಶ್ಯಕ ಗೊಂದಲ ನಿರ್ಮಾಣವಾಗಿರುವ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಮುಂದೆ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read