HomeKarnatakaಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ: ಅನುಮಾನಕ್ಕೆ ಕಾರಣವಾದ ನಡೆ

ಪೊಲೀಸ್ ವಿಚಾರಣೆಗೆ ಹೆದರಿ ಯುವಕ ಆತ್ಮಹತ್ಯೆ: ಅನುಮಾನಕ್ಕೆ ಕಾರಣವಾದ ನಡೆ

ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಪೊಲೀಸ್ ವಿಚಾರಣೆಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೌನೇಶ್ ಅಬ್ಬಿಹಾಳ(30) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲವು ದಿನಗಳ ಹಿಂದೆ ಮೌನೇಶ್ ಸೋದರಮಾವ ಬಸವರಾಜ ನಾಪತ್ತೆಯಾಗಿದ್ದು, ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೌನೇಶ್ ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು.

ಗುರುವಾರ ಮತ್ತೆ ವಿಚಾರಣೆಗೆ ಬರುವಂತೆ ಹೇಳಿದ್ದು, ಯುವಕ ವಿಚಾರಣೆಗೆ ಹೆದರಿ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮೌನೇಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular