BIG NEWS : ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣ : ನಗರದಾದ್ಯಂತ 144 ಸೆಕ್ಷನ್ ಜಾರಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡ, ಶಾಂತಿನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆಯಲ್ಲಿ ರಾಗಿಗುಡ್ಡಕ್ಕೆ ಸೀಮಿತವಾಗಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಶಿವಮೊಗ್ಗ ನಗರದಾದ್ಯಂತ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.

ಶಾಂತಿನಗರದ ಮುಖ್ಯ ರಸ್ತೆಯಲ್ಲಿ ಪೊಲೀಸರು ವಾಹನಗಳ ತಪಾಸಣೆ ಮಾಡುತ್ತಿದ್ದು, ಪ್ರಮುಖ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಕ್ಲೋಸ್ ಮಾಡಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಬೈಕ್ ಸವಾರನನ್ನು ವಶಕ್ಕೆ ಪಡೆಯಲಾಗಿದೆ. ಈದ್ ಮಿಲಾದ್ ಮೆರವಣಿಗೆ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ಇದರ ನಂತರ ವಾತಾವರಣ ಪ್ರಕ್ಷುಬ್ಧಗೊಂಡಿತ್ತು. ಹುಡುಗರ ಗುಂಪೊಂದು ದಾಂದಲೆ ನಡೆಸಲು ಸಿದ್ಧತೆ ಮಾಡಿಕೊಂಡಿತ್ತು. ಕೆಲವರು ದಾಂದಲೆ ನಡೆಸಿದ್ದರು. ಹೀಗಾಗಿ ಹೆಚ್ಚುವರಿ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read