HomeLatest Newsಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು

ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿ: ವಿದ್ಯಾರ್ಥಿ ಸಾವು

ಹಾಸನ:  ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹಾಸನದ ಬಿಎಂ ರಸ್ತೆಯಲ್ಲಿ ನಡೆದಿದೆ.

ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್‌ಸಿ ಓದುತ್ತಿದ್ದ ಶಶಾಂಕ್(21) ಮೃತಪಟ್ಟ ಯುವಕ. ಬೈಕ್ ನಲ್ಲಿ ವೇಗವಾಗಿ ಬರುತ್ತಿದ್ದ ವೇಳೆ ಬಿಎಂ ರಸ್ತೆಯಲ್ಲಿ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಶಶಾಂಕ್ ನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆಸ್ಪತ್ರೆ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಹಾಸನ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular