HomeKarnatakaBIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

BIG NEWS: ಪೊಲೀಸ್ ವಾಹನಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಆಟೋ ಚಾಲಕ

ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಕ್ಕಾಗಿ ಪೊಲೀಸ್ ವಾಹನಕ್ಕೆ ಆಟೋ ಚಾಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಲ್ಲಿ ನಡೆದಿದೆ.

ಆಟೋ ಚಾಲಕ ಅನ್ಸಾರ್ ಎಂಬಾತ ಸಮವಸ್ತ್ರ ಧರಿಸದೇ ಮೊಬೈಲ್ ನಲ್ಲಿ ಮಾತನಾಡುತ್ತ ಆಟೋ ಚಲಾಯಿಸುತ್ತಿದ್ದ. ಆಟೋ ತಡೆದ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ದಂಡ ವಿಧಿಸಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ, ಆಟೋ ಹಾಗೂ ಪೊಲೀಸ್ ವಾಹನಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular