ಬೆಂಗಳೂರು: ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರವಿರಲಿ. ಅವಹೇಳನಕಾರಿ ಪೋಸ್ಟ್, ಗೌರವಕ್ಕೆ ಧಕ್ಕೆತರುವಂತಹ ಪೋಸ್ಟ್ ಹಾಕಿದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಯಾವುದೇ ಸಂಘಟನೆ ಅಥವಾ ಸಂಸ್ಥೆಗಳ ವಿರುದ್ಧ ಅವಹೇಳನಕಾರಿಯಾಗಿ ಅಥವಾ ಸಾರ್ವಜನಿಕ ಶಾಂತಿ ಭಂಗವಾಗುವಂತಹ ಅಥವಾ ಕಾನೂನು ಸುವ್ಯವಸ್ಥೆಗೆ ತೊಡಕಾಗುವಂತಹ ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಯಾವುದೇ ಪೋಸ್ಟ್ ಹಾಕುವ ಮುನ್ನ ಎಚ್ಚರಿಕೆ ವಹಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ ಸಂದೇಶ ರವಾನಿಸಿದೆ.