HomeKarnatakaಪೊಲೀಸ್ ಪತಿಯಿಂದಲೇ ಪತ್ನಿಗೆ ಕಿರುಕುಳ; ದೂರು ದಾಖಲು; ತನಿಖೆಗೆ ಆದೇಶಿಸಿದ ಎಸ್ ಪಿ

ಪೊಲೀಸ್ ಪತಿಯಿಂದಲೇ ಪತ್ನಿಗೆ ಕಿರುಕುಳ; ದೂರು ದಾಖಲು; ತನಿಖೆಗೆ ಆದೇಶಿಸಿದ ಎಸ್ ಪಿ

ತುಮಕೂರು: ಪೊಲೀಸ್ ಸಿಬ್ಬಂದಿಯೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಹಿಂಸಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪತಿ ಕಿರುಕುಳಕ್ಕೆ ನೊಂದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ತುಮಕೂರು ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಸುನೀಲ್ ಕುಮಾರ್ ವಿರುದ್ಧ ಪತ್ನಿ ಸಹನಾ ವರದಕ್ಷಿಣೆ ಕಿರುಕುಳ ದೂರು ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಂದುವರೆ ವರ್ಷದ ಹಿಂದೆ ಸುನೀಲ್ ಕುಮಾರ್ ಹಾಗೂ ಸಹನಾ ವಿವಾಹವಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ಸಹನಾ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಕೂಡ ಆಗಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮನೆಗೆ ವಾಪಸ್ ಆದ ಸಹನಾಗೆ ಪತಿ ಸುನೀಲ್ ಕುಮಾರ್ ಕಿರುಕುಳ ನೀಡುತ್ತಿದ್ದನಂತೆ. ಮನೆ ಕಟ್ಟಬೇಕು, ಕಾರು ತಗೋಬೇಕು 20 ಲಕ್ಷ ರೂಪಾಯಿ ಹಣ ತರುವಂತೆ ಪೀಡಿಸುತ್ತಿದ್ದನಂತೆ. ಸಾಲದ್ದಕ್ಕೆ ಲಾಠಿಯಿಂದ ಹೊಡೆಯುತ್ತಿದ್ದನಂತೆ.

ಪತಿಯ ಕಿರುಕುಳ, ಹಿಂಸೆಗೆ ಬೇಸತ್ತ ಸಹನಾ ತುಮಕೂರು ಎಸ್ ಪಿ ಭೇಟಿಯಾಗಿ ದೂರು ನೀಡಿದ್ದಾರೆ. ಎಸ್. ಪಿ ಆದೇಶದ ಮೇರೆಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸುನೀಲ್ ಕುಮಾರ್ ವಿರುದ್ಧ ದೂರು ದಾಖಲಾಗಿದೆ. ತನಿಖೆ ನಡೆಸುವಂತೆ ಪೊಲೀಸ್ ವರಿಷ್ಠಾಧಿಕಾರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular