HomeKarnataka5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ...

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಮಾ. 3 ರಿಂದ 6ರವರೆಗೆ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ರಾಜ್ಯಾದ್ಯಂತ ಮಾರ್ಚ್ 3 ರಿಂದ 6 ರವರೆಗೆ ಮೂರು ದಿನಗಳ ಕಾಲ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಯಸಿಕೆ ಹಾಕಿಸಬೇಕು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಮಾರ್ಚ್ 3ರಿಂದ 6ರವರೆಗೆ ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದು, ಈ ವೇಳೆ ಹಿಂದುಳಿದ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ತಿಳಿಸಿದ್ದಾರೆ.

ಮೊದಲ ದಿನ ಲಸಿಕಾ ಕೇಂದ್ರಗಳಲ್ಲಿ ಹಾಗೂ ಮೂರು ದಿನಗಳ ಅವಧಿಯಲ್ಲಿ ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular