HomeKarnatakaರಾಜ್ಯದಲ್ಲಿ ಮೊದಲ ದಿನವೇ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ರಾಜ್ಯದಲ್ಲಿ ಮೊದಲ ದಿನವೇ 60 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಬೆಂಗಳೂರು: ಭಾನುವಾರದಿಂದ ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ ಶುರುವಾಗಿದ್ದು, ಮೊದಲ ದಿನ ನಿರ್ದಿಷ್ಟ ಗುರಿಯ ಶೇಕಡ 96ರಷ್ಟು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. 60 ಲಕ್ಷ ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಹೊಸಪೇಟೆಯ ಕಮಲಾಪುರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ರಾಜ್ಯದ ಒಟ್ಟು 32 ಜಿಲ್ಲೆಗಳಲ್ಲಿನ 5 ವರ್ಷದೊಳಗಿನ 62,85,880 ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಗುರಿ ಹೊಂದಲಾಗಿತ್ತು. ಇದರಲ್ಲಿ ಮೊದಲ ದಿನ ರಾಜ್ಯಾದ್ಯಂತ 33, 712 ಬೂತ್ ಗಳಲ್ಲಿ 60,41,483 ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗಿದೆ. ಶೇ. 96ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular