ಹೊಂದಾಣಿಕೆ ರಾಜಕೀಯ ಮಾಡುವವರು ಪಕ್ಷದಿಂದ ಹೊರಕ್ಕೆ: ವಿಜಯೇಂದ್ರ

ಹಾಸನ: ಹೊಂದಾಣಿಕೆ ರಾಜಕೀಯ ಮಾಡುವ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಪಕ್ಷ ಶುದ್ಧೀಕರಣ ಆಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಹಿರಿಯರ ಆಸೆಯಂತೆ ಪಕ್ಷ ಶುದ್ಧೀಕರಣವಾಗುತ್ತಿದೆ. ಬರುವ ದಿನಗಳಲ್ಲಿ ಎಲ್ಲವೂ ಸಹ ಸರಿ ಹೋಗುತ್ತದೆ ಎಂದು ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಾ ಇದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read