ರಾಜ್ಯ ರಾಜಕೀಯದ ಬಗ್ಗೆ ಬಿಜೆಪಿ ನಾಯಕ ಯತ್ನಾಳ್ ಹೊಸ ಬಾಂಬ್

ವಿಜಯಪುರ: ಲೋಕಸಭೆ ಚುನಾವಣೆಯೊಳಗೆ ರಾಜ್ಯ ರಾಜಕೀಯದಲ್ಲಿ ಅನಾಹುತ ನಡೆಯಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಮೊದಲು ಅಥವಾ ನಂತರ ರಾಜಕೀಯ ವಲಯದಲ್ಲಿ ಅನಾಹುತ ನಡೆಯಲಿದ್ದು, ಇದಕ್ಕಾಗಿ ಕಾಂಗ್ರೆಸ್ ಭಯಗೊಂಡಿರುವುದರಿಂದ ಬಿಜೆಪಿಯವರನ್ನು ಸೆಳೆಯತೊಡಗಿದೆ. ಈ ಮೂಲಕ ಲೋಕಸಭೆ ಚುನಾವಣೆ ಗೆಲ್ಲಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ತಮ್ಮ ಪಕ್ಷದ 135 ಶಾಸಕರ ಮೇಲೆಯೇ ವಿಶ್ವಾಸ ಇಲ್ಲದಂತಾಗಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮುಖಂಡರಿಗೆ ಗಾಳ ಹಾಕುತ್ತಿದ್ದಾರೆ. ಬಿಜೆಪಿಯವರು ಬಂದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎನ್ನುವ ವಿಶ್ವಾಸ ಕಾಂಗ್ರೆಸ್ ನಾಯಕರಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ,

ಕರ್ನಾಟಕದಲ್ಲಿ ಬಿಜೆಪಿ ಮುಳುಗುತ್ತಿದೆ ಎಂದು ಕಾಂಗ್ರೆಸ್ ನವರು ಗುಲ್ಲೆಬ್ಬಿಸುತ್ತಿದ್ದು, ಸೋಲಿನಿಂದ ಕಂಗೆಡದೆ ಬಿಜೆಪಿ ಫಿನಿಕ್ಸ್ ಪಕ್ಷಿಯಂತೆ ಮತ್ತೆ ಹುಟ್ಟಿ ಬರಲಿದೆ. ಲೋಕಸಭೆ ಚುನಾವಣೆ ವೇಳೆಗೆ ರಾಜಕೀಯ ವಲಯದಲ್ಲಿ ಅನಾಹುತ ನಡೆಯಲಿದೆ ಎಂದು ಯತ್ನಾಳ್ ಬಾಂಬ್ ಸಿಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read