HomeLive Newsಪ್ರವಾಸಿ ಸಂಸ್ಥೆಯಿಂದ ಸೇವಾನ್ಯೂನತೆ: ಪರಿಹಾರ ನೀಡಲು ಆದೇಶ

ಪ್ರವಾಸಿ ಸಂಸ್ಥೆಯಿಂದ ಸೇವಾನ್ಯೂನತೆ: ಪರಿಹಾರ ನೀಡಲು ಆದೇಶ

ಶಿವಮೊಗ್ಗ: ಟರ್ನ್ ಕೀ ಹಾಲಿಡೇಸ್ ಪ್ರವಾಸಿ ಸಂಸ್ಥೆಯಿಂದ ಸೇವಾನ್ಯೂನತೆಯಾಗಿದ್ದು, ಪರಿಹಾರ ನೀಡಲು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ಶಿವಮೊಗ್ಗ ಹೊನ್ನಾಳಿ ರಸ್ತೆ, ಮಲ್ಲಿಕಾರ್ಜುನ ನಗರದ ಎಂ.ಕೆ. ದಿವಾಕರ್ ಎಂಬುವವರು ಬೆಂಗಳೂರು ಮಹಾಲಕ್ಷ್ಮೀ ಲೇಔಟ್‌ನ ಟರ್ನ್ ಕೀ ಹಾಲಿಡೇಸ್ ಪ್ರವಾಸಿ ಸಂಸ್ಥೆಯ ವಿರುದ್ಧ ಹಣವನ್ನು ಹಿಂದುರುಗಿಸದೇ ಸೇವಾನ್ಯೂನತೆಯನ್ನು ಎಸಗಿದ ಬಗ್ಗೆ ವಕೀಲರ ಮೂಲಕ ನೀಡಿದ ದೂರಿನ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಹಣವನ್ನು ಹಿಂದುರುಗಿಸುವಂತೆ ಎದುರುದಾರರಿಗೆ ಆದೇಶಿಸಿ ತೀರ್ಪು ನೀಡಿದೆ.

ದೂರುದಾರರು ಎದುರುದಾರರಲ್ಲಿ ಜಪಾನ್ ಮತ್ತು ಸೌತ್ ಕೋರಿಯ ದೇಶಗಳಿಗೆ 10 ದಿನಗಳ ಪ್ರವಾಸಕ್ಕಾಗಿ ನೋಂದಣಿ ಮಾಡಿಸಿದ್ದು, ಏಪ್ರಿಲ್ 2025ರಲ್ಲಿ ಪ್ರವಾಸ ನಿಗಧಿಯಾಗಿದ್ದು ಪ್ರವಾಸದ ಮೊತ್ತ 4,09,865 ರೂ.ಗಳನ್ನು ಹಂತ ಹಂತವಾಗಿ ಪಾವತಿಸಿರುತ್ತಾರೆ. ಮಾರ್ಚ್-2025 ರಲ್ಲಿ ದೂರದಾರರಿಗೆ ಅಫಘಾತವಾಗಿ ಕಾಲು ಮುರಿದುಹೋಗಿದ್ದು, ವೈದ್ಯರು ಒಂದು ತಿಂಗಳು ವಿಶ್ರಾಂತಿಗೆ ಸಲಹೆ ನೀಡಿದ್ದರಿಂದ ಪ್ರವಾಸ ಹೋಗಲು ಸಾಧ್ಯವಾಗದೆ ರದ್ದು ಮಾಡಿ, ಪಾವತಿಸಿದ ಹಣವನ್ನು ವಾಪಸು ಮಾಡಲು ಕೋರಿ ಪತ್ರ ಬರೆದಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಂಸ್ಥೆಯು ವಿವಿಧ ಸಂಸ್ಥೆಗಳಿಂದ ಪಡೆದಿರುವ ರೀಫಂಡ್ ಮೊತ್ತ ರೂ. 2,52,000/-ಗಳನ್ನು ಜುಲೈ 2025ರೊಳಗೆ ಇದೇ ತೆರನಾದ ಯಾವುದಾದರೂ ಪ್ರವಾಸಕ್ಕೆ ಬಂದಲ್ಲಿ ಹೊಂದಾಣಿಕೆ ಮಾಡುವುದಾಗಿ ತಿಳಿಸಿರುತ್ತಾರೆ. ಆದರೆ ದೂರದಾರರು ಮೊತ್ತವನ್ನು ವಾಪಾಸ್ಸು ನೀಡಲು ಲೀಗಲ್ ನೋಟೀಸ್ ನೀಡಿದ್ದು, ಅದಕ್ಕೂ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.

ಆಯೋಗವು ದೂರನ್ನು ದಾಖಲಿಸಿಕೊಂಡು ಎದುರುದಾರರಿಗೆ ನೋಟೀಸ್ ನೀಡಿದ್ದು, ಎದುರುದಾರರು ಆಯೋಗಕ್ಕೆ ತಮ್ಮ ವಕೀಲರ ಮೂಲಕ ಹಾಜರಾಗಿದ್ದು, ಎರಡೂ ಪಕ್ಷಗಾರರು ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ವಾದ ವಿವಾದವನ್ನು ಆಲಿಸಿ, ಎದುರುದಾರರು ದೂರದಾರರ ಪ್ರವಾಸಕ್ಕೆ ನೀಡಿದ ಮೊತ್ತವನ್ನು ಹಿಂತಿರುಗಿಸದೆ ಬೇರೆ ಪ್ರವಾಸಕ್ಕೆ ಹೊಂದಾಣಿಕೆ ಮಾಡುತ್ತೇವೆ ಎಂಬುದು ಸಹಾ ಸೇವಾನ್ಯೂನ್ಯತೆಯಾಗುತ್ತದೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿದೆ. ಎದುರುದಾರರು ದೂರುದಾರರಿಗೆ ನೀಡಬೇಕಾಗಿದ್ದ ರೂ.2.52 ಲಕ್ಷಗಳಿಗೆ ದಿ: 28/05/2025 ರಿಂದ ಅನ್ವಯವಾಗುವಂತೆ ವಾರ್ಷಿಕ ಶೇ. 8ರ ಬಡ್ಡಿಯನ್ನು ಸೇರಿಸಿ, ಈ ಆದೇಶವಾದ 45 ದಿನಗಳೊಳಗೆ ಪಾವತಿಸುವುದು ಹಾಗೂ ರೂ. 10,000 ಗಳನ್ನು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 10ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಏ.18 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular