HomeKarnatakaBIG NEWS: ಬಿಜೆಪಿ ಮತ್ತೊಂದು ಶಾಕ್; ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

BIG NEWS: ಬಿಜೆಪಿ ಮತ್ತೊಂದು ಶಾಕ್; ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಎರಡೂ ಪಕ್ಷಗಳ ಸಾಲು ಸಾಲು ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಬೆಂಬಲಿಗರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್ ತಪ್ಪಲು ನಾನೂ ಸ್ವಲ್ಪ ಕಾರಣ. ಅವರಿಗೆ ಟಿಕೆಟ್ ತಪ್ಪಿಸಿದ್ದು ನಾನೇ ಅಂತ ಗೊತ್ತಿದ್ದರೂ ಸುಮ್ಮನಿದ್ದರು. ಶ್ರೀನಿವಾಸ್ ಕೂಡ ಒಲ್ಲದ ಮನಸ್ಸಿನಿಂದಲೇ ಬಿಜೆಪಿಯಲ್ಲಿದ್ದರು. ಕೃಷ್ಣಪ್ಪ, ಶ್ರೀನಿವಾಸ್ ಇಬ್ಬರೂ ಕೂಡ ಸಾಮಾಜಿಕ ನ್ಯಾಯದ ಪರ ಇದ್ದವರು. ಕಾಂಗ್ರೆಸ್ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪಕ್ಷ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular