HomeKarnatakaರಾಜ್ಯದಲ್ಲಿ ಪಿಒಪಿ ಗಣೇಶ​ ಮೂರ್ತಿ ಸಂಪೂರ್ಣ ನಿಷೇಧ; ತಯಾರಿಕೆ, ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್: ಸಚಿವ...

ರಾಜ್ಯದಲ್ಲಿ ಪಿಒಪಿ ಗಣೇಶ​ ಮೂರ್ತಿ ಸಂಪೂರ್ಣ ನಿಷೇಧ; ತಯಾರಿಕೆ, ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್: ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಪ್ಲಾಸ್ಟರ್​ ಆಫ್​ ಪ್ಯಾರಿಸ್​(ಪಿಒಪಿ) ಗಣೇಶ ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಿಒಪಿ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಸಾಗಾಟ ಮತ್ತು ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಸಚಿವ ರಾಮಲಿಂಗಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಿಒಪಿ ಪರಿಸರಕ್ಕೆ ಹಾನಿಕಾರಕವಾಗಿರುವುದರಿಂದ ಪಿಒಪಿ ಮೂರ್ತಿಗಳ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ನಗರದ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಿಳಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಸಂಗ್ರಹಣೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಇದನ್ನು ಉಲ್ಲಂಘಿಸಿ ಮೂರ್ತಿಗಳನ್ನು ತಯಾರಿಸುವ ಅಥವಾ ಮಾರಾಟ ಮಾಡುವವರಿಗೆ ನೋಟಿಸ್ ಜಾರಿಗೊಳಿಸಿ, ಮೂರ್ತಿಗಳನ್ನು ವಶಪಡಿಸಿಕೊಂಡು ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಒಂದು ಬಾರಿ ಬಳಕೆ ಮಾಡುವಂತಹ ಪ್ಲಾಸ್ಟಿಕ್ ಘಟಕಗಳನ್ನು ಪತ್ತೆ ಹಚ್ಚಲು ಅಗತ್ಯ ತಾಂತ್ರಿಕ ಸಾಮರ್ಥ್ಯವಿರುವ ಸೂಕ್ತ ಸರ್ಕಾರಿ ಸಂಸ್ಥೆಯನ್ನು ಗುರುತಿಸಬೇಕು. ಅಂತಹ ಘಟಕಗಳ ಪಟ್ಟಿ ಸಿದ್ಧಪಡಿಸಿ, ಉತ್ಪಾದನೆಯನ್ನು ತಕ್ಷಣ ನಿಲ್ಲಿಸುವಂತೆ ನೋಟಿಸ್ ನೀಡಬೇಕು. ಆದೇಶ ಪಾಲಿಸದ ಘಟಕಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಂದ ಪ್ಲಾಸ್ಟಿಕ್ ತಯಾರಿಕಾ ಘಟಕಗಳು ಹಾಗೂ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಅಗತ್ಯವಿರುವ ವಿದ್ಯುತ್ ಸಂಪರ್ಕ ಮತ್ತು ಬಳಕೆಗೆ ಸಂಬಂಧಿಸಿದ ವಿವರಗಳನ್ನು ನಿಯಮಾನುಸಾರ ಒದಗಿಸುವಂತೆ ಸೂಚನೆ ನೀಡಬೇಕು. ಮಾಹಿತಿ ಪಡೆದು ಪಿಒಪಿ ಮೂರ್ತಿಗಳ ನಿಷೇಧ ಹಾಗೂ ಏಕಬಳಕೆ ಪ್ಲಾಸ್ಟಿಕ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೊಲೀಸ್ ಇಲಾಖೆಯ ಸಹಕಾರ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆಯಬೇಕು. ಉಲ್ಲಂಘನೆಗಳ ವಿರುದ್ಧ ಸ್ಥಳೀಯ ಪೊಲೀಸರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ ಮತ್ತು ವಿತರಣೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸದಿರುವ ಕುರಿತಂತೆ ಜಿಬಿಎ ಮುಖ್ಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಬೇಕು. ವಿಶೇಷ ತಪಾಸಣಾ ತಂಡಗಳನ್ನು ರಚಿಸಿ, ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವುದು ಹಾಗೂ ಉಲ್ಲಂಘನಾಕಾರರ ವಿರುದ್ಧ ದಂಡ ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular