BREAKING: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಪವಿತ್ರ ಜಯರಾಮ್ ವಿಧಿವಶ

ಕನ್ನಡ, ತೆಲುಗು ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಗಳಿಸಿದ್ದ ಕರ್ನಾಟಕದ ಮಂಡ್ಯ ಮೂಲದ ನಟಿ ಪವಿತ್ರ ಜಯರಾಮ್ (35) ಇಂದು ಬೆಳಗ್ಗೆ ಆಂಧ್ರಪ್ರದೇಶದ ಕರ್ನೂಲಿನ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ವಿಧಿವಶರಾಗಿದ್ದಾರೆ.

ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರ ಜಯರಾಮ್ ಬಳಿಕ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ನಂತರ ತೆಲುಗು ಕಿರುತೆರೆಯನ್ನು ಪ್ರವೇಶಿಸಿದ ಅವರು ‘ತ್ರಿನಯನಿ’ ಧಾರಾವಾಹಿ ಮೂಲಕ ಅಲ್ಲಿನ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು.

ಇಂದು ಬೆಳಗ್ಗೆ ತಮ್ಮ ಕುಟುಂಬ ಸದಸ್ಯರೊಂದಿಗೆ ಬರುವ ವೇಳೆ ಆಂಧ್ರಪ್ರದೇಶದ ಕರ್ನೂಲ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಪವಿತ್ರ ಜಯರಾಮ್ ಅವರ ನಿಧನಕ್ಕೆ ಕಿರುತೆರೆಯ ಹಲವಾರು ಕಲಾವಿದರು ಸಂತಾಪ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read