BREAKING NEWS: ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರ

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ. ಕನ್ನಡಿಗರ ಮೀಸಲಾತಿ ನೀಡುವ ವಿಧೇಯಕ ಪುನರ್ ಪರಿಶೀಲಿಸಲಾಗುವುದು. ಹೀಗಾಗಿ ತಕ್ಷಣಕ್ಕೆ ಮಸೂದೆ ಮಂಡಿಸದಿರಲು ನಿರ್ಧರಿಸಲಾಗಿದೆ.

ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸಂತೋಷ್ ಲಾಡ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ನಾಲ್ಕು ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಕ್ಯಾಬಿನೆಟ್ ನಲ್ಲಿ ಸೂಕ್ತ ಮಾಹಿತಿ ಹಂಚಿಕೆಯಾಗದೆ ಗೊಂದಲ ಉಂಟಾಗಿದೆ. ಹೀಗಾಗಿ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡಿಸದಿರಲು ತೀರ್ಮಾನಿಸಲಾಗಿದೆ.

https://twitter.com/siddaramaiah/status/1813596347792310500

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read