HomeKarnatakaವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಮನೆ ಬಾಗಿಲಿಗೆ DL, RC ಕಾರ್ಡ್ ರವಾನೆ

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಮನೆ ಬಾಗಿಲಿಗೆ DL, RC ಕಾರ್ಡ್ ರವಾನೆ

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಮನೆ ಬಾಗಿಲಿಗೆ ಆರ್.ಸಿ., ಡಿಎಲ್ ತಲುಪಿಸಲಾಗುವುದು

ಇನ್ನು ಡಿಎಲ್, ಆರ್.ಸಿ. ಕಾರ್ಡ್ ಗಾಗಿ ಆರ್.ಟಿ.ಒ. ಕಚೇರಿಗೆ ಅಲೆದಾಡಬೇಕಿಲ್ಲ. ಇವುಗಳನ್ನು ಮನೆಗೆ ತಲುಪಿಸಲು ಸಾರಿಗೆ ಇಲಾಖೆ ವ್ಯವಸ್ಥೆ ಮಾಡಿದೆ. ಪೋಸ್ಟಲ್ ಮೂಲಕವೇ ಮನೆಗಳಿಗೆ ರವಾನೆ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್ವಲಪ್ ಕವರ್ ನಲ್ಲಿ ಸೂಚನಾ ಫಲಕಗಳೊಂದಿಗೆ ಕೊರಿಯರ್ ವ್ಯವಸ್ಥೆ ಮಾಡಲಿದ್ದು, ಈ ಸಂಬಂಧ ಅಂಚೆ ಇಲಾಖೆ ಆರ್‌ಟಿಒ ಒಪ್ಪಂದ ಮಾಡಿಕೊಂಡಿದೆ. ಈ ಬಗ್ಗೆ ಸರ್ಕಾರದಿಂದಲೂ ಅನುಮೋದನೆ ನೀಡಲಾಗಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆದೇಶ ನೀಡಲಾಗಿದ್ದು, ಇನ್ನು ಮುಂದೆ ಸ್ಪೀಡ್ ಪೋಸ್ಟ್ ಮೂಲಕವೇ ಆರ್‌ಸಿ, ಡಿಎಲ್ ಮನೆ ಬಾಗಿಲಿಗೆ ಬರಲಿದೆ. ಅರ್ಜಿದಾರರು ಆನ್ಲೈನ್ ನಲ್ಲಿ ದಾಖಲೆಗಳ ಬಗ್ಗೆ ಟ್ರ್ಯಾಕ್ ಮಾಡಬಹುದು. ನೂತನ ವ್ಯವಸ್ಥೆ ಜಾರಿ ಬಗ್ಗೆ ರಾಜ್ಯ ಸಾರಿಗೆ ಇಲಾಖೆ ಯಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular