HomeKarnatakaಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು...

ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು ಅಂಚೆ ಕಚೇರಿಗೆ ನುಗ್ಗಿದ ಸಾವಿರಾರು ಜನ

ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಗಿಬಿದ್ದ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಸೂಪರ್ ಮಾರ್ಕೆಟ್ ನ ಬಹಮನಿ ಕೋಟೆ ಮಂದಿರುವ ಪ್ರಧಾನ ಅಂಚೆ ಕಚೇರಿಗೆ ಸೋಮವಾರ ಬೆಳಗ್ಗೆ ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ನುಗ್ಗಿದ್ದು, ಉಳಿತಾಯ ಖಾತೆ ತೆರೆಯಲು ಮುಂದಾಗಿದ್ದಾರೆ. ಇದನ್ನು ಕಂಡು ಗಾಬರಿಯಾದ ಅಂಚೆ ಕಚೇರಿ ಸಿಬ್ಬಂದಿ ಖಾತೆ ತೆರೆಯಲು ಹರಸಹಾಸ ನಡೆಸಿದ್ದಾರೆ.

ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿರುವುದರಿಂದ ಮೋದಿ ಹಣ ಹಾಕುತ್ತಾರೆ. ರಾಜ್ಯದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದರಿಂದ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎಂದು ವದಂತಿ ಹರಡಿದ್ದರಿಂದ ಜನ ಖಾತೆ ತೆರೆಯಲು ಮುಗಿಬಿದ್ದಿದ್ದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular