HomeKarnatakaರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂಭ್ರಮದ ಹೊತ್ತಲ್ಲೇ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ ವಿದ್ಯಾರ್ಥಿ

ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂಭ್ರಮದ ಹೊತ್ತಲ್ಲೇ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ ವಿದ್ಯಾರ್ಥಿ

ಕಾರವಾರ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮಾಚರಣೆ ನಡೆಯುವಾಗ ಕೋಮ ಭಾವನೆ ಕೆರಳಿಸುವ ಪೋಸ್ಟ್ ಹಂಚಿಕೊಂಡ ಪಿಯುಸಿ ವಿದ್ಯಾರ್ಥಿ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿದ್ಯಾರ್ಥಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದು, ಸಾರ್ವಜನಿಕರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಚಿತ್ತಾಕುಲ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಪೊಲೀಸರು ಕೂಡಲೇ ಕ್ರಮ ಕೈಗೊಂಡು ವಿದ್ಯಾರ್ಥಿ ಮತ್ತು ಆತನ ಪೋಷಕರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿ ಕ್ಷಮೆ ಕೋರಿ ಪೋಸ್ಟ್ ತೆಗೆದು ಹಾಕಿದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular