HomeKarnatakaಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕೆ ಅಂಚೆ ಕಚೇರಿ ಅವಧಿ ವಿಸ್ತರಣೆ

ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕೆ ಅಂಚೆ ಕಚೇರಿ ಅವಧಿ ವಿಸ್ತರಣೆ

ಬೆಂಗಳೂರು: ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಚೆ ಕಚೇರಿ ಅವಧಿ ವಿಸ್ತರಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಎಲ್ಲಾ ಕಚೇರಿಗಳಲ್ಲಿ ವ್ಯವಹಾರದ ಅವಧಿ ವಿಸ್ತರಿಸಲಾಗಿದೆ.

ಕಚೇರಿ ಮುಕ್ತಾಯದ ಅವಧಿವರೆಗೆ ಚೆಕ್ ಬುಕ್, ಎಟಿಎಂ ಕಾರ್ಡ್ ವಿತರಣೆ, ಪ್ಯಾನ್, ಆಧಾರ್, ಮೊಬೈಲ್ ಸಂಖ್ಯೆ, ವಿಳಾಸ, ಖಾತೆ ನವೀಕರಣ ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಕಚೇರಿ ಮುಕ್ತಾಯದ 30 ನಿಮಿಷ ಮೊದಲು ರಿಜಿಸ್ಟರ್, ಸ್ಪೀಡ್ ಪೋಸ್ಟ್, ಇಎಂಒ ಸೇವೆಗಳು, ಇಪಿಒ ಸೇವೆಗಳು, ಇ ಪೇಮೆಂಟ್, ಬಿಲ್ ಪಾವತಿ, ಆಧಾರ್,  ಸಿ.ಎಸ್.ಸಿ. ವಹಿವಾಟು, ಪಿಎಲ್ಐ, ಆರ್.ಪಿ.ಎಲ್.ಐ. ಸೇವೆಗಳು, ಅಂಚೆ ಚೀಟಿ, ಲೇಖನ ಸಾಮಗ್ರಿಗಳ ಮಾರಾಟ ಸೇವೆ ನೀಡಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular