HomeKarnatakaಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ; ಆ.28 ರಂದು ನೇರ...

ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ; ಆ.28 ರಂದು ನೇರ ಸಂದರ್ಶನ

ಧಾರವಾಡ :   ಹಿರಿಯ ಅಂಚೆ ಅಧೀಕ್ಷಕರು ಧಾರವಾಡ ವಿಭಾಗದಲ್ಲಿ ಅಂಚೆ  ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ  ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ಅಗಸ್ಟ್ 28,2026 ರಂದು ಬೆಳಗ್ಗೆ 11 ಗಂಟೆಗೆ ಧಾರವಾಡ ಕೆ.ಸಿ.ಪಾರ್ಕ್  ಹತ್ತಿರ ಇರುವ ಹಿರಿಯ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನ ಕರೆಯಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಗಳಿಂದ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಧಾರವಾಡ ಜಿಲ್ಲೆಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2026-27ನೇ ಸಾಲಿಗೆ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು, ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು ಜಿಲ್ಲೆಯ 7 ಬ್ಲಾಕುಗಳಲ್ಲಿ ಜಾರಿಗೊಳಿಸಲು ಪ್ರತಿ ಬ್ಲಾಕ ಸಂಪನ್ಮೂಲ ಕೇಂದ್ರಕ್ಕೆ ಒಬ್ಬರಂತೆ ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿಯನ್ನು ಸಮಾಲೋಚಕರ ಹುದ್ದೆಯ ಆಧಾರದ ಮೇಲೆ ಒಂದು ವರ್ಷದ ಅವಧಿಯಲ್ಲಿ 06 ತಿಂಗಳ ಕಾರ್ಯಭಾರಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ/ಎಂ.ಎಸ್.ಸಿ ಪದವಿಯನ್ನು ಹೊಂದಿರಬೇಕು. ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವ ಹಾಗೂ ಕನ್ನಡ, ಇಂಗ್ಲಿಷ ಮತ್ತು ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಅಗಸ್ಟ್ 17, 2026 ರೊಳಗಾಗಿ ನಿಗದಿತ ನಮೂನೆಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಅರ್ಹ ಅವಶ್ಯಕ ದಾಖಲೆಗಳೊಂದಿಗೆ ಕಛೇರಿ ಆರ್.ಎಮ್.ಎಸ್.ಎ ವಿಭಾಗದಲ್ಲಿ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:9880984396, 9741177623 ಗೆ ಮತ್ತು ಎಸ್.ಎಮ್.ಹುಡೇದಮನಿ ಡಿ.ವಾಯ್.ಪಿ.ಸಿ ಆರ್.ಎಮ್.ಎಸ್.ಎ ಅವರನ್ನು ಸಂಪರ್ಕಿಸ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular