HomeLatest Newsಏಪ್ರಿಲ್ 1, 2ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಅಂಚೆ ಮತದಾನ

ಏಪ್ರಿಲ್ 1, 2ರಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಗೆ ಅಂಚೆ ಮತದಾನ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಾಪ್ತಿಯಲ್ಲಿ, 85 ವರ್ಷ ಹಾಗೂ ಮೇಲ್ಪಟ್ಟ (85+) ಮತ್ತು ವಿಶೇಷ ವಿಕಲಚೇತನರ ಮನೆ ಬಾಗಿಲಿಗೆ ತೆರಳಿ ಅಂಚೆ ಮತಪತ್ರಗಳ ಮೂಲಕ ಮತದಾನ ಮಾಡುವ ಪ್ರಕ್ರಿಯೆ ಏಪ್ರಿಲ್ 1 ಮತ್ತು 2 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಈಗಾಗಲೇ ಅಂಚೆ ಮತದಾನ ಮಾಡಲು ಅರ್ಜಿ ಸಲ್ಲಿಸಿರುವ ಎಲ್ಲಾ ಮತದಾರರು ತಮ್ಮ ಮನೆಯ ಮತಕ್ಷೇತ್ರದಲ್ಲಿ ಇದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳಿಗೆ ಸಹಕಾರ ನೀಡಿ ಮತದಾನ ಮಾಡುವಂತೆ ಚುನಾವಣಾಧಿಕಾರಿ, ನಂ-107 ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಉಪ ವಿಭಾಗಾಧಿಕಾರಿಗಳು ದಾವಣಗೆರೆ ಉಪ ವಿಭಾಗ ಸಂತೋಷ್ ಕುಮಾರ್ ತಿಳಿಸಿದ್ದಾರೆ.

15.37 ಲಕ್ಷ ರೂ. ನಗದು ವಶ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 148.97 ಲೀಟರ್‌ ಅಂದಾಜು ರೂ. 91738 ಮೊತ್ತದಷ್ಟು ಮದ್ಯ ವಶಪಡಿಸಿಕೊಳ್ಳಲಾಗಿದೆ,  15,37,000 ರೂ. ನಗದನ್ನು ಇದುವರೆಗೆ ವಶಪಡಿಸಿಕೊಂಡಿದ್ದು ಅದರಲ್ಲಿ 7,05,000 ರೂ. ನಗದನ್ನು ಸಮರ್ಪಕ ದಾಖಲೆ ಸಲ್ಲಿಸಿದವರಿಗೆ ಹಿಂದಿರುಗಿಸಲಾಗಿದೆ. ಉಳಿದ 8,32,000/- ರೂ. ಗಳನ್ನು ಖಜಾನೆಯಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದ್ದಾರೆ. 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular