ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದು, ಕೃತ್ಯದಲ್ಲಿ ಭಾಗಿಯಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಪೋಸ್ಟರ್‌ಗಳನ್ನು ಭದ್ರತಾ ಸಂಸ್ಥೆಗಳು ಹಾಕಿವೆ.
‘ಭಯೋತ್ಪಾದನೆ ಮುಕ್ತ ಕಾಶ್ಮೀರ’ ಎಂಬ ಸಂದೇಶವನ್ನು ಹೊಂದಿರುವ ಪೋಸ್ಟರ್‌ಗಳು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹಲವು ಸ್ಥಳಗಳಲ್ಲಿ ಕಾಣಿಸಿಕೊಂಡಿವೆ.
ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೋಸ್ಟರ್‌ಗಳು ಘೋಷಿಸಿವೆ. ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದು ಏಜೆನ್ಸಿಗಳು ಭರವಸೆ ನೀಡಿವೆ.
ಪಹಲ್ಗಾಮ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಹುಲ್ಲುಗಾವಲಿನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ 25 ಪ್ರವಾಸಿಗರು ಮತ್ತು ಒಬ್ಬ ನೇಪಾಳಿ ಸೇರಿದಂತೆ ಕನಿಷ್ಠ 26 ಜನರು ಸಾವನ್ನಪ್ಪಿದರು. 2019 ರಲ್ಲಿ ಪುಲ್ವಾಮಾ ಹತ್ಯಾಕಾಂಡದ ನಂತರ ಕಾಶ್ಮೀರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.
#WATCH | Jammu & Kashmir | Posters appear in different parts of Pulwama District, announcing Rs 20 lakh reward on information of terrorists involved in Pahalgam terror attack pic.twitter.com/QN6cqfHq7r
— ANI (@ANI) May 13, 2025