HomeKarnatakaಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ: ಜೂ. 6 ರ ನಂತರ ಚುನಾವಣಾ ಪ್ರಕ್ರಿಯೆ ಆರಂಭ

ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ: ಜೂ. 6 ರ ನಂತರ ಚುನಾವಣಾ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದಲ್ಲಿರುವ ಸಹಕಾರ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ.

ರಾಜ್ಯದಲ್ಲಿ ಇನ್ನೊಂದು ತಿಂಗಳಲ್ಲಿ ಅವಧಿ ಪೂರ್ಣಗೊಳ್ಳುವ ಹಾಲು ಒಕ್ಕೂಟಗಳು, ಡಿಸಿಸಿ ಬ್ಯಾಂಕುಗಳು, ಸೇರಿದಂತೆ ವಿವಿಧ ಸಹಕಾರ ಸಂಘಗಳ ಚುನಾವಣೆಗೆ ಸಹಕಾರ ಇಲಾಖೆ ದಿನಾಂಕ ನಿಗದಿಪಡಿಸಿ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಸಹಕಾರ ಸಂಘಗಳು ಮತ್ತು ಸಹಕಾರ ಬ್ಯಾಂಕುಗಳು ಮತದಾರರ ಪಟ್ಟಿ ರಚಿಸಿ ಪ್ರಕ್ರಿಯೆ ಕೈಗೊಂಡಿದ್ದು, ಇದೇ ವೇಳೆ ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಿದ್ದರಿಂದ ಸಹಕಾರ ಸಂಘಗಳು, ಹಾಲು ಒಕ್ಕೂಟಗಳು ಮತ್ತು ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿಗಳ ಚುನಾವಣೆಯನ್ನು ಯಥಾಸ್ಥಿತಿಯಲ್ಲಿ ಸ್ಥಗಿತಗೊಳಿಸಬೇಕು. ಜೂನ್ 6 ರ ನಂತರ ಚುನಾವಣಾ ಪ್ರಕ್ರಿಯೆ ಮುಂದುವರಿಸುವಂತೆ ಆದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular