ಬೆಂಗಳೂರು : 222 ಗ್ರಾಮ ಪಂಚಾಯಿತಿ ಉಪಚುನಾವಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯ ಚುನಾವಣಾ ಆಯೋಗವು ಬಹುನಿರೀಕ್ಷಿತ ಗ್ರಾಮ ಪಂಚಾಯಿತಿ ಉಪಚುನಾವಣೆಗೆ ದಿನಾಂಕ ಘೋಷಿಸಿತ್ತು. ಮೇ 11 ಮತ್ತು 14ರಂದು ಮತದಾನ ಮತ್ತು ಫಲಿತಾಂಶ ಪ್ರಕಟವಾಗಲಿದೆ. ಏಪ್ರಿಲ್ 22ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿತ್ತು.
ರಾಜ್ಯದ 222 ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 260 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ಇದು ವಿವಿಧ ಕಾರಣಗಳಿಂದ (ಖಾಲಿ, ರಾಜೀನಾಮೆ, ಅಕಾಲ ಮರಣ) ತೆರವಾದ ಸ್ಥಾನಗಳಿಗಾಗಿ ನಡೆಯುವ ಚುನಾವಣೆಯಾಗಿದೆ. ಸದ್ಯ ಗ್ರಾಮ ಪಂಚಾಯಿತಿ ಉಪಚುನಾವಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
You Might Also Like
TAGGED:ಗ್ರಾಮ ಪಂಚಾಯಿತಿ