HomeKarnatakaBREAKING : ನ.15 ರಂದು ನಿಗದಿಯಾಗಿದ್ದ 'BJP' ಕಾರ್ಯಕರ್ತರ ಸಮಾವೇಶ ಮುಂದೂಡಿಕೆ : ನ.23 ಕ್ಕೆ...

BREAKING : ನ.15 ರಂದು ನಿಗದಿಯಾಗಿದ್ದ ‘BJP’ ಕಾರ್ಯಕರ್ತರ ಸಮಾವೇಶ ಮುಂದೂಡಿಕೆ : ನ.23 ಕ್ಕೆ ನಿಗದಿ

ಬೆಂಗಳೂರು : ನ.15 ರಂದು ನಡೆಯಬೇಕಿದ್ದ ಬಿಜೆಪಿ ( BJP)   ಕಾರ್ಯಕರ್ತರ ಸಮಾವೇಶ ಮುಂದೂಡಿಕೆಯಾಗಿದೆ.

ಹೌದು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಬದಲಾವಣೆ ಆಗಿದೆ. ನ.15 ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಪದಗ್ರಹಣ ಮಾತ್ರ ನಿಗದಿ ಮಾಡಲಾಗಿದ್ದು, ನಂತರ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಿಗದಿಯಾಗಿತ್ತು, ಆದರೆ ಇದೀಹಗ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.

ಹೌದು, ಅಂದು ನಿಗದಿಯಾಗಿದ್ದ BJP ಕಾರ್ಯಕರ್ತರ ಸಮಾವೇಶವನ್ನು ನ.23ರ ನಂತರ ನಡೆಸಲು ನಿರ್ಧರಿಸಿದ್ದು, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಕರೆದು ದೊಡ್ಡ ಸಮಾವೇಶ ನಡೆಸಲು ಚಿಂತನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನವೆಂಬರ್ 15ರಂದು ಬಿಜೆಪಿ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.ಮಲ್ಲೇಶ್ವರಂ ರಾಜ್ಯ ಬಿಜೆಪಿ ಕಚೇರಿಯಲ್ಲಿ ನವೆಂಬರ್ 15 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ಅಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಲಿದ್ದು, ನವೆಂಬರ್ 16ರಂದು ಕಾರ್ಯಕರ್ತರ ಸಭೆ ನಡೆಸುವ ನಿರ್ಣಯ ಮಾಡಿದ್ದೇವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೇವೆ. ಪಕ್ಷದ ಎಲ್ಲಾ ಹಿರಿಯರ ಸಮ್ಮುಖದಲ್ಲಿ ಜವಾಬ್ದಾರಿ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular