ಕಲಬುರಗಿಯಲ್ಲಿ ಇಂದು ನಿಗದಿಯಾಗಿದ್ದ ಜನತಾದರ್ಶನ ಮುಂದೂಡಿಕೆ

ಕಲಬುರಗಿ : ಕಲಬುರಗಿಯಲ್ಲಿ ಇಂದು ನಿಗದಿಯಾಗಿದ್ದ ಜನತಾದರ್ಶನ ಮುಂದೂಡಿಕೆಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

ದಿನಾಂಕ 9 ಜನವರಿ 2024 ರಂದು ಅಂದರೆ ಇಂದು ಕಲಬುರಗಿಯಲ್ಲಿ ಜನತಾದರ್ಶನವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಅದಕ್ಕೆ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಕೂಡ ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು.

ಆದರೆ ಅಂದೇ (9 ಜನವರಿ 2024ರಂದು) ಮಾನ್ಯ ಮುಖ್ಯಮಂತ್ರಿಗಳು ಬೆಂಗಳೂರಿನ ಗೃಹಕಚೇರಿಯಲ್ಲಿ “ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ” ಸಂಬಂಧಿಸಿದಂತೆ ಸಚಿವರ ಮಟ್ಟದ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕಡ್ಡಾಯವಾಗಿ ಭಾಗಿಯಾಗಬೇಕಿರುವ ಅನಿವಾರ್ಯ ಕಾರಣದಿಂದ ಇಂದು ಕಲಬುರಗಿಯಲ್ಲಿ ಆಯೋಜಿಸಿದ್ದ ಜನತಾದರ್ಶನ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ. ಅತಿ ಶೀಘ್ರದಲ್ಲಿಯೇ ಮುಂದಿನ ಜನತಾದರ್ಶನದ ದಿನಾಂಕವನ್ನು ತಿಳಿಸಲಾಗುವುದು.ನಮ್ಮದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರ. ನಿಮ್ಮ ಸೇವೆಗೆ ನಮ್ಮ ಸರ್ಕಾರ ಬದ್ದವಾಗಿದ್ದು, ನಿಮ್ಮ ಸಹಕಾರ ಸದಾ ಇರಲಿ ಎಂದು ವಿನಂತಿಸುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read