HomeKarnatakaಹೆಚ್ಚು ಪೌತಿ ಖಾತೆ ಮಾಡುವ ಸಿಬ್ಬಂದಿಗೆ ಪ್ರೋತ್ಸಾಹ ಧನ: ಕೃಷ್ಣ ಬೈರೇಗೌಡ

ಹೆಚ್ಚು ಪೌತಿ ಖಾತೆ ಮಾಡುವ ಸಿಬ್ಬಂದಿಗೆ ಪ್ರೋತ್ಸಾಹ ಧನ: ಕೃಷ್ಣ ಬೈರೇಗೌಡ

“ಮಾರ್ಚ್ ಅಂತ್ಯದೊಳಗೆ ಗುರಿ ಮೀರಿ ಅತಿ ಹೆಚ್ಚು ಪೌತಿ ಖಾತೆ ಮಾಡುವ ರಾಜ್ಯದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಹಾಗೂ ಗ್ರಾಮ ಸಹಾಯಕರಿಗೆ ಕಂದಾಯ ಇಲಾಖೆಯಿಂದ ರೂ. 5 ಕೋಟಿಗಳ ಪ್ರೋತ್ಸಾಹ ಧನ ವಿತರಣೆ ಮಾಡಲಾಗುತ್ತದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಧಾರವಾಡ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಧಾರವಾಡ ಜಿಲ್ಲೆಯ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.

“ಕಂದಾಯ ಇಲಾಖೆಯಲ್ಲಿ ಸಾರ್ವಜನಿಕ ಸ್ನೆಹಿ ಕಾರ್ಯಕ್ರಮಗಳನ್ನು ಕೈಗೊಂಡು ಅನೇಕ ಸುಧಾರಣೆಗಳನ್ನು ತರಲಾಗಿದೆ. ಮೃತರ ಕುಟುಂಬಗಳ ಆಸ್ತಿಯನ್ನು ವಾರಸುದಾರರ ಹೆಸರಿಗೆ ವರ್ಗಾಯಿಸುವ ಪೌತಿ ಖಾತೆ ಮಾಡುವ ಕಾರ್ಯ ಉತ್ತಮವಾಗಿ ನಡೆದಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಧಾರವಾಡ ಜಿಲ್ಲೆಯಲ್ಲಿ 58,212 ಪೌತಿ ಖಾತೆಗಳ ಪೈಕಿ 36,046 ಪ್ರಕರಣಗಳು ಮುಕ್ತಾಯವಾಗಿದ್ದು, ಬಾಕಿ ಇರುವ 4,896 ಪ್ರಕರಣಗಳನ್ನು ಮಾರ್ಚ ಅಂತ್ಯದೊಳಗೆ ಮುಕ್ತಾಯಗೊಳಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

“ಪೌತಿ ಖಾತೆಯಲ್ಲಿ 2026ರ ಮಾರ್ಚದೊಳಗೆ ಗುರಿಮಿರಿ ಸಾಧನೆ ಮಾಡುವ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಹಾಗೂ ಗ್ರಾಮ ಸಹಾಯಕರಿಗೆ ಕಂದಾಯ ಇಲಾಖೆಯಿಂದ ರೂ. 5 ಕೋಟಿಗಳ ಪ್ರೋತ್ಸಾಹ ಧನ ವಿತರಿಸಲಾಗುತ್ತದೆ” ಎಂದು ಸಚಿವರು ಹೇಳಿದರು.

“ಧಾರವಾಡ ಜಿಲ್ಲೆಯಲ್ಲಿ ಹಕ್ಕುಪತ್ರ ವಿತರಣೆಗೆ 5,378 ಅರ್ಜಿಗಳು ಸಲ್ಲಿಕೆಯಾಗಿದ್ದು, 4,331 ಅರ್ಜಿಗಳನ್ನು ಅನುಮೋದಿಸಿ, ವಿತರಣೆಗೆ ಸಿದ್ದಪಡಿಸಲಾಗಿದೆ ಮತ್ತು ಬಾಕಿ ಇರುವ 915 ಅರ್ಜಿಗಳ ವಿಲೆವಾರಿಗೆ ಕ್ರಮ ವಹಿಸಬೇಕು” ಎಂದರು.

“ಜಿಲ್ಲೆಯಲ್ಲಿ ಆಧಾರ ಸೀಡಿಂಗ್ ಪ್ರಗತಿಯಲ್ಲಿದ್ದು ಶೇ.85.80ರಷ್ಟು ಗುರಿ ಸಾಧಿಸಲಾಗಿದೆ. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ 9 ಮೇಲ್ಮನವಿ ಪ್ರಕರಣಗಳು, ಉಪವಿಭಾಗಧಿಕಾರಿಗಳ ನ್ಯಾಯಾಲಯದಲ್ಲಿ 11 ಪ್ರಕರಣಗಳು, ವಿವಿಧ ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 69 ಪ್ರಕರಣಗಳು ಬಾಕಿ ಇದ್ದು ಶೀಘ್ರದಲ್ಲಿ ಇತ್ಯರ್ಥಪಡಿಸಬೇಕು” ಎಂದು ತಿಳಿಸಿದರು.

“ಭೂಮಿ ವಿಭಾಗದಲ್ಲಿನ ಬಾಕಿ ಪ್ರಕರಣಗಳನ್ನು ನಿಯಮಾನುಸಾರ ಮುಕ್ತಾಯಗೊಳಿಸಬೇಕು.  ಭೂಸುರಕ್ಷಾ ಯೋಜನೆ, ಲ್ಯಾಂಡ್‍ಬಿಟ್ ಯೋಜನೆ, ಇ-ಆಫೀಸ್ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು”ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಶಾಸಕರಾದ ಎನ್.ಎಚ್.ಕೋನರಡ್ಡಿ, ಎಫ್.ಎಚ್.ಜಕ್ಕಪ್ಪನವರ, ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮುಂತಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular