HomeLatest NewsBREAKING: ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

BREAKING: ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಬೆಂಗಳೂರು: ಪೌಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘೋರ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬಿಹಾರ ಮೂಲದ ರಾಜು ಪಾಸ್ವಾನ್ (23) ಮೃತ ಕಾರ್ಮಿಕ. ಸಂತೋಷ್ ಎಂಬುವವರಿಗೆ ಸೇರಿದ ಕಂಪನಿಯಲ್ಲಿ ರಾಜು ಕೆಲಸ ಮಾಡುತ್ತಿದ್ದ. ಇಂದು ಮಧ್ಯಾಹ್ನ ಕೆಲಸ ಮಾಡುತ್ತಿದ್ದ ವೇಳೆ ಪೊಡರ್ ಮಿಕ್ಸಿಂಗ್ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಬಾಗಲಗುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular