ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-4 ಮಲ್ನಾಡ್ ಆಸ್ಪತ್ರೆ ಮತ್ತು ಎಫ್-14 ಹಸೂಡಿ ಐಪಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಸೆ.30 ರ ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಮಾಚೇನಹಳ್ಳಿ, ಜಯಂತಿಗ್ರಾಮ, ಕಿಯೊನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ. ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.