ಮಡಿಕೇರಿ : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಭಾಗಮಂಡಲ ಫೀಡರ್ನಲ್ಲಿ ತುಲಾ ಸಂಕ್ರಮಣ ಕಾವೇರಿ ತೀರ್ಥೋಧ್ಬವ ಪ್ರಯುಕ್ತ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಅಕ್ಟೋಬರ್, 12 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.
ಆದ್ದರಿಂದ ತಾಳತ್ತ್ಮನೆ ಬೆಟ್ಟಗೇರಿ, ಅಪ್ಪಂಗಳ, ಚೇರಂಬಾಣೆ, ಕೋಪಟ್ಟಿ, ಭಾಗಮಂಡಲ, ತಲಕಾವೇರಿ, ಚೇರಂಗಾಲ, ಕೋರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.