ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ವ್ಯತ್ಯಯ ಹೆಚ್ಚಾಗಿದೆ. ವಿವಿಧ ಕಾಮಗಾರಿ ಉದ್ದೇಶದಿಂದ ಹಲವೆಡೆ ಪವರ್ ಕಟ್ ನಿಂದ ಸಮಸ್ಯೆ ಎದಿರಿಸುವಂತಾಗಿದೆ. ಅದೇ ರೀತಿ ಬೆಸ್ಕಾಂ ವ್ಯಾಪ್ತಿಯ ಈ ಜಿಲ್ಲೆಗಳಲ್ಲಿಯೂ ನಾಳೆ ಹಾಗೂ ಫೆ.12ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ನಿರ್ವಹಣೆ ಮತ್ತು ಇತರ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಬುಧವಾರ ಹಾಗೂ ಗುರುವಾರ ವಿದ್ಯುತ್ ಕಡಿತ ವಾಗಲಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ.
ಕೆಪಿಟಿಸಿಲ್ ತುರ್ತು ನಿರ್ವಹಣೆ ಮತ್ತು ಇತರ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಫೆಬ್ರವರಿ 11 ಹಾಗೂ 12 ರಂದು ಕರೆಂಟ್ ಇರಲ್ಲ.
ಚಿತ್ರದುರ್ಗ ಜಿಲ್ಲೆಯ ತಳಕು ಬೆಸ್ಕಾಂ ಉಪ ವಿಭಾಗದ ‘ತಳಕು 66/11’ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 11ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 4ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದಾಗಿ ಬೇಡರಡ್ಡಿ-ಹಳ್ಳಿ, ತಿಮ್ಮಪ್ಪಯನಹಳ್ಳಿ, ಎನ್.ದೇವರಹಳ್ಳಿ, ತಳಕು, ಮೊನ್ನೆಕೋಟೆ, ದೇವರೆಡ್ಡಿಹಳ್ಳಿ, ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೂ ನಿರಂತರ ಜ್ಯೋತಿ, ಕೃಷಿ ಬಳಕೆಯ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ತುಮಕೂರಿನಲ್ಲಿ ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾಮಗಾರಿ ಕೈಗೊಂಡಿರುವುದರಿಂದ ಫೆ.12ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ 66/11 ಕೆವಿ ಅಂಕಸಂದ್ರ ಉಪಸ್ಥಾವರದಿಂದ ವಿದ್ಯುತ್ ಸರಬರಾಜಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕೆಪಿಟಿಸಿಎಲ್ ವತಿಯಿಂದ ಜಾಲಹಳ್ಳಿ ವಿಭಾಗದ 66/11 ಕೆವಿ ಎಂಇಐ ಉಪಕೇಂದ್ರದಲ್ಲಿ ತುರ್ತು ನಿರ್ವ ಹಣಾ ಕಾರ್ಯ ಹಮ್ಮಿಕೊಂಡಿರುವ ಕಾರಣ ಈ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಿದೆ.

