HomeKarnatakaವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಿನ್ನಲೆ ಜ.18 ರಂದು ಬೆಳಗ್ಗೆ 10 ರಿಂದ...

ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಿನ್ನಲೆ ಜ.18 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ: ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಜ.18 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ, ಎಫ್-4 ಸಂತೇಕಡೂರು, ಎಫ್-8 ಗಣಿದಾಳು ಮತ್ತು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular