ಆಸ್ಟ್ರೇಲಿಯಾ : ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ ಬಳಿ ಶನಿವಾರ 5.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.
ಭೂಕಂಪವು 10 ಕಿಮೀ (6.21 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಇಎಂಎಸ್‌ಸಿ ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.