HomeLatest NewsBIG UPDATE : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : ಮೃತಪಟ್ಟವರ ಸಂಖ್ಯೆ 1411 ಕ್ಕೆ ಏರಿಕೆ...

BIG UPDATE : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ : ಮೃತಪಟ್ಟವರ ಸಂಖ್ಯೆ 1411 ಕ್ಕೆ ಏರಿಕೆ |Earthquake

ಕಾಬುಲ್ : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 1411 ಕ್ಕೆ ಏರಿಕೆಯಾಗಿದೆ.

ಆಗ್ನೇಯ ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ 11:47ರ ಸುಮಾರಿಗೆ ಭೀಕರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ. ಕಟ್ಟಡಗಳು, ಮನೆಗಳು ಸಂಪೂರ್ಣ ನೆಲಸಮವಾಗಿದ್ದು, ಅವಶೇಷಗಳಡಿ ಸಿಲುಕಿ ಹಲವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ 1411 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕಂಪದಿಂದಾಗಿ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣ ನೆಲಸಮವಾಗಿವೆ. ಹಲವು ಹಳ್ಳಿಗಳಲ್ಲಿ ತೀವ್ರ ಹಾನಿಯುಂಟಾಗಿದ್ದು, ಒಂದೇ ಹಳ್ಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ಭಾನುವಾರ ತಡರಾತ್ರಿ ಪರ್ವತಗಳಲ್ಲಿ ಭೂಕಂಪ ಸಂಭವಿಸಿದ್ದು, ಜನರು ನಿದ್ರಿಸುತ್ತಿದ್ದಾಗ ಘಟನೆ ಸಂಭವಿಸಿದೆ. ಪರಿಣಾಮ ಹಲವು ಮನೆಗಳು ನಾಶವಾಗಿದೆ. ನಾಮತ್ತು ಹಳ್ಳಿಗಳನ್ನು ನೆಲಸಮವಾಗಿದೆ. ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular