ಬೋರ್ ವೆಲ್ ವಿದ್ಯುತ್ ಮೀಟರ್ ರೀಡಿಂಗ್ ವೇಳೆ ವಿದ್ಯುತ್ ಪ್ರವಹಿಸಿ ಪವರ್ ಮನ್ ಸ್ಥಳದಲ್ಲೇ ಸಾವು

ಬೆಳಗಾವಿ: ಬೋರ್ವೆಲ್ ಮೋಟರ್ ಗೆ ಅಳವಡಿಸಿದ್ದ ವಿದ್ಯುತ್ ಮೀಟರ್ ರೀಡಿಂಗ್ ಗೆ ಹೋದಾಗ ವಿದ್ಯುತ್ ಪ್ರವಹಿಸಿ ಪವರ್ ಮನ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಜೈತನಮಾಳ ಗ್ರಾಮದ ಹೊಲವೊಂದರಲ್ಲಿ ಭಾನುವಾರ ನಡೆದಿದೆ.

ಯಳ್ಳೂರು ಗ್ರಾಮದ ರಾಹುಲ್ ಪಾಟೀಲ(30) ಮೃತಪಟ್ಟವರು. ಐಪಿ ರೀಡಿಂಗ್ ಮಾಡಲು ಹೋಗಿದ್ದ ವೇಳೆ ಟಿಪಿ ಬಾಕ್ಸ್ ನಲ್ಲಿ ವಿದ್ಯುತ್ ಪ್ರವಹಿಸಿ ರಾಹುಲ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಐಪಿ ರೈಡಿಂಗ್ ಉಸ್ತುವಾರಿಯ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ರಾಹುಲ್ ಕುಟುಂಬದವರು ಆರೋಪಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read