HomeKarnatakaBIG NEWS: ವಿಪಕ್ಷ ನಾಯಕನ ರೇಸ್ ನಲ್ಲಿ ನಾನೂ ಇದ್ದೇನೆ ಎಂದ ಮಾಜಿ ಸಚಿವ

BIG NEWS: ವಿಪಕ್ಷ ನಾಯಕನ ರೇಸ್ ನಲ್ಲಿ ನಾನೂ ಇದ್ದೇನೆ ಎಂದ ಮಾಜಿ ಸಚಿವ

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷರ ನೇಮಕವಾದ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೂ ಕಸರತ್ತು ನಡೆದಿದೆ. ನ.17ರಂದು ವಿಪಕ್ಷ ನಾಯಕನ ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ವಿಪಕ್ಷ ನಾಯಕನ ರೇಸ್ ನಲ್ಲಿ ನಾನೂ ಇದ್ದೇನೆ ಎಂದು ಮಾಜಿ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ.

ಬೀದರ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಭು ಚೌವ್ಹಾಣ್, ನಾನು ಕೂಡ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ. ಆದರೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳುವ ಮೂಲಕ ವಿಪಕ್ಷ ನಾಯಕನಾಗುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ನಾಲ್ಕು ಬಾರಿ ಶಾಸಕನಾಗಿ, ಎರಡು ಬಾರಿ ಸಚಿವನಾಗಿದ್ದೇನೆ. ಹಾಗಾಗಿ ನಾನೂ ಕೂಡ ವಿಪಕ್ಷ ನಾಯಕನ ರೇಸ್ ನಲ್ಲಿದ್ದೇನೆ. ಆದರೆ ವರಿಷ್ಠರ ನಿರ್ಧಾರವೇ ಅಂತಿಮವಾಗಿರುವುದರಿಂದ ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular