HomeKarnatakaಪ್ರದೀಪ್ ಈಶ್ವರ್, ಪ್ರಕಾಶ್ ರಾಜ್ ಇಬ್ಬರೂ ಹುಚ್ಚರು: ಹುಚ್ಚರನ್ನು ಯಾರಾದರೂ ಜೈಲಿಗೆ ಹಾಕ್ತಾರಾ? ಪ್ರತಾಪ್...

ಪ್ರದೀಪ್ ಈಶ್ವರ್, ಪ್ರಕಾಶ್ ರಾಜ್ ಇಬ್ಬರೂ ಹುಚ್ಚರು: ಹುಚ್ಚರನ್ನು ಯಾರಾದರೂ ಜೈಲಿಗೆ ಹಾಕ್ತಾರಾ? ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಪ್ರದೀಪ್ ಈಶ್ವರ್ ಹಾಗೂ ಬಹುಭಾಅಷಾ ನಟ ಪ್ರಕಾಶ್ ರಾಜ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅವರು ಇಬ್ಬರೂ ಹುಚ್ಚರು ಎಂದು ಕರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೇಶದ್ರೋಹಿಗಳು ಎಂದು ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆಗೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಟ ಪ್ರಕಾಶ್ ರಾಜ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಇಬ್ಬರೂ ಹುಚ್ಚರು ಎಂದುಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೈಸೂರಿನಲ್ಲಿ ಮಾತನಾಡಿದ ಅವರು, ಇಬ್ಬರನ್ನೂ ಸಮಾಜದವರೇ ಹುಚ್ಚರು ಎಂದು ದೂರ ಇಟ್ಟಿದ್ದಾರೆ. ಮೋದಿ ಅವರು 13 ವರ್ಷಗಳಿಂದ ತಮ್ಮನ್ನು ಬಂಧಿಸಿಲ್ಲ ಎಂದು ಪ್ರಕಾಶ್ ರಾಜ್ ಹೇಳುತ್ತಾರೆ. ಹುಚ್ಚರನ್ನು ಯಾರಾದರೂ ಬಂಧಿಸಿ ಜೈಲಿಗೆ ಹಾಕುತ್ತಾರಾ ಎಂದು ಪ್ರಶ್ನಿಸಿದ್ದಾರೆ.

ಒಬ್ಬರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದಾರೆ. ಮತ್ತೊಬ್ಬರು ಎಂಎಲ್‌ಎ ಗ್ಯಾರಂಟಿ ಶಿಶು ಎಂದು ಪ್ರದೀಪ್ ಈಶ್ವರ್ ಅವರನ್ನು ಉಲ್ಲೇಖಿಸಿ ಪ್ರತಾಪ್ ಸಿಂಹ ಟೀಕಿಸಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಅಲ್ಲಿ ಬೇರೆಯವರನ್ನು ಈಗಾಗಲೇ ಆಯ್ಕೆ ಮಾಡಿ ಇಡಲಾಗಿದೆ. ಐದು ವರ್ಷ ಏನೋ ಮಾತನಾಡಲಿ ಎಂದು ಸುಮ್ಮನೆ ಬಿಟ್ಟಿದ್ದಾರೆ ಅಷ್ಟೇ ಎಂದು ಟಾಂಗ್ ನೀಡಿದ್ದಾರೆ.

ಜನರ ಮತವನ್ನು ಕಾಪಾಡಲು ನಾನು ವಿಫಲನಾಗಿದ್ದೇನೆ: ರಾಜ್ಯದದ ಜನತೆಗೆ ಮಹತ್ವದ ಸಂದೇಶ ನೀಡಿದ ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​ಐಆರ್) ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜ್ಯದ ಜನರಿಗೆ ಮಹತ್ವದ ಸಂದೇಶ ನೀಡಿದ್ದಾರೆ.

ಎಸ್​ಐಆರ್​​ನಿಂದ ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಬೇಕು.ಜನರ ಮತವನ್ನು ಕಾಪಾಡಲು ಮುಖ್ಯಮಂತ್ರಿಯಾಗಿ ಹಾಗೂ ಪ್ರಜಾಸೇವಕನಾಗಿ ಪ್ರಯತ್ನಿಸುತ್ತಿದ್ದೇನೆ. ಆದರೆ, ಇದರಲ್ಲಿ ವಿಫಲನಾಗಿದ್ದೇನೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು ಎಂದು ತಿಳಿಸಿದ್ದಾರೆ.

ಒಂದು ಕೋಟಿಗೂ ಹೆಚ್ಚು ಮತಗಳು ಕಡಿಮೆಯಾಗಿರುವುದನ್ನು ಗಮನಿಸಿದ್ದೀರಿ. ಇದು ವಿವಿಧ ಕಾರಣಗಳಿಂದ ಆಗಿರಬಹುದು. ಆದರೆ, 50 ಲಕ್ಷಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇನ್ನೂ ಮೂರು ದಿನಗಳ ಒಳಗೆ ಅರ್ಜಿ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಕೆಲ ಬಿಜೆಪಿ ನಾಯಕರು ತಮ್ಮ ನಾಯಕರ ನಿರ್ದೇಶನದ ಮೇರೆಗೆ ಅಲ್ಪಸಂಖ್ಯಾತರು ಹಾಗೂ ದಲಿತರ ಮತಗಳನ್ನು ತೆಗೆದುಹಾಕಲು ಮುಂದಾಗಿದ್ದಾರೆ.

ಇದಕ್ಕಾಗಿ ಫಾರ್ಮ್-7 ನೀಡಲಾಗುತ್ತಿದೆ.ಈ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷದ ನಾಯಕರು ದಾಖಲೆಗಳನ್ನು ನೀಡಿದ್ದಾರೆ. ಈ ಬಗ್ಗೆ ಕ್ರಿಮಿನಲ್ ತನಿಖೆಯ ಅಗತ್ಯವಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಮತವನ್ನು ಉಳಿಸುವುದು ತಮ್ಮ ಕರ್ತವ್ಯ.

ಏನೇ ಮಾಹಿತಿ ಇದ್ದರೂ ನನ್ನ ಕಚೇರಿಗೆ ತಲುಪಿಸಿ. BLA-1, BLA-2 ಹಾಗೂ BLOಗಳಿಗೆ ಅರ್ಜಿ ನೀಡಿ ಮತಗಳನ್ನು ತೆಗೆದುಹಾಕಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರ ಬಳಿ ಇರುವ ಯಾವುದೇ ಮಾಹಿತಿಯನ್ನು ಕೂಡಲೇ ತಮ್ಮ ಕಚೇರಿಗೆ ತಲುಪಿಸುವಂತೆ ಮನವಿ ಮಾಡಿದ್ದಾರೆ. ನಾಳೆ ತಾವು ಖುದ್ದಾಗಿ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದಾರೆ.

ಅನೇಕ ಸಂಗತಿಗಳೊಂದಿಗೆ ಈ ವಿಚಾರವನ್ನು ಬಯಲಿಗೆಳೆಯುತ್ತೇನೆ. ಇದಕ್ಕೆ ಜನರ ಮಾಹಿತಿ ಅಗತ್ಯವಿದೆ. ನಮ್ಮ ಪಕ್ಷದ ಹಾಲಿ ಶಾಸಕರು ಇರುವ ಕ್ಷೇತ್ರಗಳಲ್ಲಿಯೂ ಈ ರೀತಿ ಮಾಡಲಾಗುತ್ತಿದೆ.

ಈಶ್ವರ್ ಖಂಡ್ರೆ ಅವರ ಭಾಲ್ಕಿ ಕ್ಷೇತ್ರ, ನಯನ ಮೋಟಮ್ಮ ಹಾಗೂ ತನ್ವೀರ್ ಸೇಠ್ ಅವರ ಕ್ಷೇತ್ರಗಳಲ್ಲೂ ಇಂತಹ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಇಡೀ ರಾಜ್ಯದಲ್ಲಿ ದೊಡ್ಡ ಕುತಂತ್ರ ನಡೆಯುತ್ತಿದೆ. ಎಲ್ಲರೂ ಜಾಗೃತರಾಗಿರುವಂತೆ ಮನವಿ ಮಾಡಿದ್ದಾರೆ. ಎಲ್ಲೆಲ್ಲಿ ಫಾರ್ಮ್-7 ಸಲ್ಲಿಸಲಾಗಿದೆ ಎಂಬುದರ ಕುರಿತು 12 ಗಂಟೆಯೊಳಗೆ ಮಾಹಿತಿ ಒದಗಿಸುವಂತೆ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಮತದಾನವು ದೇಶದ ಪ್ರತಿಯೊಬ್ಬ ಪ್ರಜೆಯ ಮೂಲಭೂತ ಹಕ್ಕು.SIR ನೆಪದಲ್ಲಿ ಬಿಜೆಪಿ ಜನರಿಂದ ಈ ಹಕ್ಕನ್ನು ಕಿತ್ತುಕೊಳ್ಳುತ್ತಿದೆ.ದಲಿತರು, ಬಡವರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಉದ್ದೇಶದಿಂದ ತಪ್ಪು ಮಾಹಿತಿಯೊಂದಿಗೆ ಫಾರ್ಮ್-7 ಸಲ್ಲಿಸಲಾಗುತ್ತಿದೆ. ಇಂತಹ ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಅವರು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular