HomeKarnatakaBIG NEWS: ಶಾಸಕ ಪ್ರದೀಪ್ ಈಶ್ವರ್ ವಿರುದ್ಧವೂ ಪ್ರಕರಣ ದಾಖಲಿಸಲಿ: ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಒತ್ತಾಯ

BIG NEWS: ಶಾಸಕ ಪ್ರದೀಪ್ ಈಶ್ವರ್ ವಿರುದ್ಧವೂ ಪ್ರಕರಣ ದಾಖಲಿಸಲಿ: ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಒತ್ತಾಯ

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಹಾಗೂ ಬೆಜೆಪಿ-ಜೆಡಿಎಸ್ ಕಾರ್ಯ್ಕರ್ತರು, ನಾಯಕರ ನಡುವಿನ ಸಂಘರ್ಷ ತಾರಕಕ್ಕೇರಿದೆ. ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣ ಸಂಬಂಧ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಪೌರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೂ ಬಾರದ ಪ್ರದೀಪ್ ಈಶ್ವರ್ ಈಗ ಕೆಂಪೇಗೌಡ ಜಯಂತಿಗೆ ಮಾತ್ರ ಬರಲು ಕಾರಣವೇನು? ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮೆಚ್ಚಿಸಲು ಬಂದಿದ್ದೀರಾ? ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದರೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹತ್ತಿರವಾಗಲು ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದರು.

ಶಾಸಕರು ಜಾತಿ-ಜಾತಿಗಳ ನಡುವೆ ಭಿನ್ನಾಭಿಭಿಪ್ರಾಯ ಮೂಡಿಸುತ್ತಿದ್ದಾರೆ. ನಮ್ಮ ಕಾರ್ಯ್ಕರ್ತರ ಮೇಲೆ ಹಾಕಿರುವ ಕೇಸ್ ಬಗ್ಗೆ ನಾನು ಕಾನೂನುಬ್ ಹೋರಾಟ ಮಾಡುತ್ತೇವೆ. ಕಾನೂನು ಹೋರಾಟದ ಖರ್ಚು ನಾನೇ ಭರಿಸುವೆ ಎಂದು ತಿಳಿಸಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದಲ್ಲಿ ಮೆರವಣಿಗೆ ವೇಳೆ ತೊಡೆತಟ್ಟಿ, ತೋಳು ತಟ್ಟಿ ಪ್ರಚೋದನೆ ಮಾಡುವಂತೆ ನಡೆದುಕೊಂಡಿದ್ದಾರೆ. ಜೆಡಿಎಸ್, ಬಿಜೆಪಿ ನಾಯಕರ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿದ್ದಾರೆ. ಶಾಸಕರಾದವರು ನಡೆದುಕೊಳ್ಳುವ ರೀತಿಯೇ ಇದು? ಮೊದಲು ಪ್ರದೀಪ್ ಈಶ್ವರ್ ವಿರುದ್ಧ ಕೇಸ್ ದಾಖಲಿಸಬೇಕು ಎಂದರು ಆಗ್ರಹಿಸಿದರು.

ಪ್ರಚೋದನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಿ. ಪ್ರದೀಪ್ ಈಶ್ವರ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಜಾತ್ಯಾತೀತವಾಗಿ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular