HomeKarnatakaBIG NEWS: ಶಾಸಕರ ಮೇಲೆ ಚಪ್ಪಲಿ ಎಸೆತ ಸರಿಯಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಂಡನೆ

BIG NEWS: ಶಾಸಕರ ಮೇಲೆ ಚಪ್ಪಲಿ ಎಸೆತ ಸರಿಯಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಂಡನೆ

ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ನಡೆದ ಕೆಂಪೇಗೌಡ ಜಯಂತಿ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿರುವ ಪ್ರಕರಣ ಸಂಬಂಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.

ಶಾಸಕರ ಮೇಲೆ ಚಪ್ಪಲಿ ಎಸೆಯುವುದು ಸರಿಯಲ್ಲ. ಯಾರೇ ಆಗಲಿ ಪ್ರಚೋದನೆ ನೀಡುವುದು ತಪ್ಪು, ಎಲ್ಲರೂ ಕಾನೂನಿನ ಇತಿಮಿತಿಯಲ್ಲಿದ್ದರೆ ರಾಜ್ಯಕ್ಕೆ ಒಳ್ಳೆಯ ಹೆಸರು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜೆಡಿಎಸ್‌ನವರಿಗೆ ಈಗ ಅಸ್ತಿತ್ವದ ಪ್ರಶ್ನೆ ಶುರುವಾಗಿದೆ. ಬಿಜೆಪಿ-ಜೆಡಿಎಸ್‌ನ 12 ಶಾಸಕರು ಅಡ್ಡಮತದಾನ ಮಾಡಿರುವುದು ಅವರಲ್ಲಿನ ನಾಯಕತ್ವದ ಕೊರತೆಯನ್ನು ತೋರಿಸುತ್ತದೆ. ಜವಾಬ್ದಾರಿ ಹೊತ್ತ ಆರ್. ಅಶೋಕ್ ಮತ್ತು ವಿಜಯೇಂದ್ರ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಶಾಸಕರ ಮೇಲೆ ಚಪ್ಪಲಿ ಎಸೆತ: ನಾಲ್ವರು ಅರೆಸ್ಟ್:
ಚಿಕ್ಕಬಳ್ಳಾಪುರದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ಮೆರವಣಿಗೆ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಹಾಗೂ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಭಾಗಿಯಾಗದಂತೆ ಅಡ್ಡಿ ಪಡಿಸಿದ ಪ್ರಕರಣ ಸಂಬಂಧ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸೇರಿ ನಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೆಂಪೇಗೌಡ ಜಯಂತ್ತಿ ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹಾಗೂ ಶಾಸಕ ಪ್ರದೀಪ್ ಈಶ್ವರ್ ನಡುವೆ ಗಲಾಟೆಯಾಗಿದ್ದು, ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವೇಳೆ ಮೆರವಣಿಗೆ ವೇಳೆ ವ್ಯಕ್ತಿಯೋರ್ವ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದಿರುವ ಘಟನೆ ನಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್‌ಐ ಅಮರ್ ಅವರು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೇಸ್ ದಾಖಲಾಗಿದೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಬಂಧಿತ ಆರೋಪಿಗಳು. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಪೊಲೀಸ್ ಠಾಣೆ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಕೆಳಗಿಳಿಸಬೇಕು ಎಂದು ಘೋಷಣೆ ಕೂಗಿ ಗಲಾಟೆ ಆರಂಭಿಸಿದರು. ಕಾರ್ಯಕ್ರಮಕ್ಕೆ ತೀವ್ರ ಅಡ್ಡಿಯಾದಾಗ ಸ್ಥಳದಲ್ಲಿದ್ದ ಸ್ವಾಮೀಜಿಯವರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ಕಾರ್ಯಕ್ರಮ ಮುಂದುವರಿಯಲು ಅನುವು ಮಾಡಿಕೊಟ್ಟರು.

ಆದರೆ, ಕಾರ್ಯಕ್ರಮ ಮುಗಿದ ಬಳಿಕ ಗಲಾಟೆ ಮತ್ತಷ್ಟು ವಿಕೋಪಕ್ಕೆ ತಿರುಗಿತು. ಪ್ರದೀಪ್ ಈಶ್ವರ್ ಅವರು ತಮ್ಮ ಕಾರಿನ ಸನ್‌ರೂಫ್ ಮೂಲಕ ಹೊರಬಂದು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ, ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ಜೆಡಿಎಸ್ ಕಾರ್ಯಕರ್ತರಿಗೆ ತಿರುಗೇಟು ನೀಡಲು ಮೀಸೆ ತಿರುವಿ, ತೋಳು ತಟ್ಟಿ ಸವಾಲು ಹಾಕಿದ್ದಾರೆ. ಇದರಿಂದ ತೀವ್ರ ರೊಚ್ಚಿಗೆದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕರ ಮೇಲೆ ಚಪ್ಪಲಿ ಎಸೆದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದಲ್ಲೇ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular